alex Certify ನಟ ಧ್ರುವ ಸರ್ಜಾ ಕುಟುಂಬಕ್ಕೆ ಹೊಸ ಕುಡಿ ಆಗಮನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಟ ಧ್ರುವ ಸರ್ಜಾ ಕುಟುಂಬಕ್ಕೆ ಹೊಸ ಕುಡಿ ಆಗಮನ

ಬೆಂಗಳೂರು: ಸ್ಯಾಂಡಲ್ವುಡ್ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹೆಣ್ಣು ಮಗುವಿನ ತಂದೆಯಾಗಿದ್ದಾರೆ. ಬೆಂಗಳೂರಿನ ಬನಶಂಕರಿಯ ಆಸ್ಪತ್ರೆಯಲ್ಲಿ ಅವರ ಪತ್ನಿ ಪ್ರೇರಣಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಸಂತಸದ ಸುದ್ದಿ ಹಂಚಿಕೊಂಡಿರುವ ಧ್ರುವ ಸರ್ಜಾ ತಾಯಿ, ಮಗು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ.

ಶನಿವಾರ ಸಂಜೆ ಬನಶಂಕರಿಯ ಕೆಆರ್ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ಪ್ರೇರಣಾ ಅವರನ್ನು ದಾಖಲಿಸಲಾಗಿದ್ದು, ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. 2019 ರಲ್ಲಿ ಧ್ರುವ ಸರ್ಜಾ ಬಾಲ್ಯದ ಗೆಳತಿ ಪ್ರೇರಣಾ ಅವರನ್ನು ಮದುವೆಯಾಗಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...