ಅಣ್ಣನ ಆಶೀರ್ವಾದದಿಂದ ನನಗೆ ಮತ್ತು ನನ್ನ ಪತ್ನಿಗೆ ಕೊರೊನಾ ನೆಗೆಟಿವ್ ವರದಿ ಬಂದಿದೆ ಎಂದು ನಟ ಧ್ರುವ ಸರ್ಜಾ ಹೇಳಿದ್ದಾರೆ.
ಧ್ರುವ ಸರ್ಜಾ ಮತ್ತು ಪ್ರೇರಣಾ ದಂಪತಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಇಬ್ಬರೂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದು, ನಂತರ ಲಕ್ಷಣ ಕಡಿಮೆಯಾಗಿದ್ದರಿಂದ ಮನೆಯಲ್ಲೇ ಕ್ವಾರಂಟೈನ್ ನಲ್ಲಿದ್ದು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.
ಇಬ್ಬರಿಗೂ ಚಿಕಿತ್ಸೆ ನಂತರ ಕೊರೊನಾ ನೆಗೆಟಿವ್ ವರದಿ ಬಂದಿದೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಧ್ರುವ ಸರ್ಜಾ, ನನಗೆ ನನ್ನ ಪತ್ನಿಗೆ ಕೊರೊನಾ ನೆಗೆಟಿವ್ ರಿಪೋರ್ಟ್ ಬಂದಿದೆ. ನಿಮ್ಮೆಲ್ಲರ ಪ್ರಾರ್ಥನೆ, ಅಣ್ಣನ ಆಶೀರ್ವಾದದಿಂದ ನೆಗೆಟಿವ್ ವರದಿ ಬಂದಿದ್ದು ಕೃತಜ್ಞತೆ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ. ಪ್ರತಿಯೊಂದು ಸಂದರ್ಭದಲ್ಲೂ ತಮ್ಮೊಂದಿಗೆ ನಿಂತಿರುವ ಮಾವ ಅರ್ಜುನ್ ಸರ್ಜಾ ಅವರಿಗೆ ಹಾಗೂ ಚಿಕಿತ್ಸೆ ನೀಡಿದ ವೈದ್ಯರಿಗೆ ಧ್ರುವ ಸರ್ಜಾ ಕೃತಜ್ಞತೆ ಸಲ್ಲಿಸಿದ್ದಾರೆ.