ಬೆಂಗಳೂರು: ಕನಕಪುರ ಸಮೀಪದ ನೆಲಗುಳಿಯಲ್ಲಿರುವ ಧ್ರುವ ಸರ್ಜಾ ಅವರ ಫಾರ್ಮ್ ನಲ್ಲಿ ನಟ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ವಿಶಾಲವಾದ ಜಾಗದ ಮಧ್ಯೆ ಗುಂಡಿಯನ್ನು ತೆಗೆಯಲಾಗುತ್ತಿದೆ. ಅಂತ್ಯಕ್ರಿಯೆ ಸ್ಥಳದಲ್ಲಿ ಪೆಂಡಾಲ್, ಆಸನಗಳ ವ್ಯವಸ್ಥೆ ಮಾಡಲಾಗಿದೆ. ಅಂತ್ಯಕ್ರಿಯೆ ಸ್ಥಳಕ್ಕೆ ಎಲ್ಲರಿಗೂ ಅವಕಾಶ ನೀಡದೆ ಕೆಲವರಿಗೆ ಮಾತ್ರ ಅವಕಾಶ ನೀಡಲಾಗುವುದು. ಸಿನಿಮಾ ರಂಗದ ಗಣ್ಯರು, ಕುಟುಂಬದವರು ಹೊರತುಪಡಿಸಿ ಉಳಿದವರಿಗೆ ಅವಕಾಶ ಇರುವುದಿಲ್ಲ ಎನ್ನಲಾಗಿದೆ.
ಬೆಂಗಳೂರಿನ ನಿವಾಸದಲ್ಲಿ ಅಂತಿಮ ದರ್ಶನದ ನಂತರ ಮಧ್ಯಾಹ್ನ ಧ್ರುವ ಸರ್ಜಾ ಫಾರ್ಮ್ ಗೆ ಪಾರ್ಥಿವ ಶರೀರವನ್ನು ಅಂತಿಮ ವಿಧಿವಿಧಾನದ ಬಳಿಕ ಅಂತ್ಯಕ್ರಿಯೆ ನೆರವೇರಿಸಲಾಗುವುದು. ರಾತ್ರಿ ಅರ್ಜುನ್ ಸರ್ಜಾ ಆಗಮಿಸಿದ ನಂತರ ಕುಟುಂಬದವರೆಲ್ಲ ಸೇರಿ ಧ್ರುವ ಸರ್ಜಾ ಬೇಡಿಕೆಯಂತೆ ಅವರ ಫಾರ್ಮ್ ನಲ್ಲಿ ಅಂತ್ಯಕ್ರಿಯೆ ನೆರವೇರಿಸಲು ನಿರ್ಧರಿಸಿದ್ದಾರೆ.