alex Certify ಕೊರೊನಾ ನೆಗೆಟಿವ್ ರಿಪೋರ್ಟ್: ಬಿಗ್ ಬಿ ಅಮಿತಾಬ್ ಬಚ್ಚನ್ ತೀವ್ರ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ನೆಗೆಟಿವ್ ರಿಪೋರ್ಟ್: ಬಿಗ್ ಬಿ ಅಮಿತಾಬ್ ಬಚ್ಚನ್ ತೀವ್ರ ಆಕ್ರೋಶ

ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಅವರಿಗೆ ಕೋವಿಡ್ ಟೆಸ್ಟ್ ನಲ್ಲಿ ನೆಗೆಟಿವ್ ವರದಿ ಬಂದಿದೆ ಎನ್ನುವ ಸುದ್ದಿ ಸತ್ಯಕ್ಕೆ ದೂರವಾಗಿದೆ ಎಂದು ಹೇಳಲಾಗಿದೆ.

ಅಮಿತಾಬ್ ಬಚ್ಚನ್ ಅವರೇ ಇದೊಂದು ಸುಳ್ಳು ಸುದ್ದಿ ಎಂದು ಟ್ವೀಟ್ ಮಾಡಿದ್ದಾರೆ. ಅಮಿತಾಬ್ ಬಚ್ಚನ್, ಅಭಿಷೇಕ್ ಬಚ್ಚನ್, ಐಶ್ವರ್ಯಾ ರೈ ಮತ್ತು ಆರಾಧ್ಯ ಅವರಿಗೆ ಕೊರೋನಾ ಸೋಂಕು ತಗುಲಿ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಅಮಿತಾಬ್ ಬಚ್ಚನ್ ಅವರಿಗೆ ಕೊರೋನಾ ನೆಗೆಟಿವ್ ರಿಪೋರ್ಟ್ ಬಂದಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ, ಇದನ್ನು ಅಲ್ಲಗಳೆದಿರುವ ಅಮಿತಾಬ್ ಬಚ್ಚನ್, ಕೊರೋನಾ ನೆಗೆಟಿವ್ ವರದಿ ಬಂದಿರುವ ಸುದ್ದಿಯೇ ಸುಳ್ಳು. ಇದೊಂದು ಬೇಜಾವಾಬ್ದಾರಿಯುತ, ನಕಲಿ ಮತ್ತು ಸರಿಪಡಿಸಲಾಗದ ಸುಳ್ಳು ಸುದ್ದಿ. ಇದು ತಪ್ಪಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...