ರೆಬಲ್ ಸ್ಟಾರ್ ಅಂಬರೀಶ್ ಅವರ 68ನೇ ವರ್ಷದ ಹುಟ್ಟುಹಬ್ಬ ಇಂದು. ಅಂಬಿ ಇಲ್ಲದ ಸಂದರ್ಭದಲ್ಲಿ ಅಭಿಮಾನಿಗಳಿಗೆ ವಿಶೇಷ ಉಡುಗೊರೆ ನೀಡಲಾಗುತ್ತಿದೆ.
ಅಭಿಷೇಕ್ ಅಂಬರೀಶ್ ಅಭಿನಯದ ‘ಬ್ಯಾಡ್ ಮ್ಯಾನರ್ಸ್’ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಲಾಗುವುದು. ಅಂಬರೀಶ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸುಮಲತಾ ಅಂಬರೀಶ್ ಶುಭಾಶಯ ಹೇಳಿದ್ದಾರೆ.
ಅಂಬರೀಶ್ ಇದ್ದರೆ 68ನೇ ವರ್ಷಕ್ಕೆ ಕಾಲಿಡುತ್ತಿದ್ದರು. ಅವರನ್ನು ವಿಧಿ ದೂರ ಮಾಡಿದೆ. ಅವರೊಂದಿಗೆ ಕೆಲವು ಹೆಜ್ಜೆಯನ್ನು ಹಾಕಿದ್ದಕ್ಕೆ ನನಗೆ ಹೆಮ್ಮೆಯಿದೆ ಎಂದು ಹೇಳಿದ್ದಾರೆ. ಕಲಾವಿದರು, ಅಭಿಮಾನಿಗಳು ಅಂಬಿ ಹುಟ್ಟುಹಬ್ಬದ ಹಿನ್ನಲೆಯಲ್ಲಿ ವಿವಿಧ ಚಟುವಟಿಕೆ, ಸೇವಾ ಕಾರ್ಯಕೈಗೊಂಡಿದ್ದಾರೆ.