alex Certify ಸಿನಿಮಾ ಮಂದಿರ ಸಿಬ್ಬಂದಿ ಸಂಕಷ್ಟಕ್ಕೆ ಮಿಡಿದ ಸುದೀಪ್ ಅಭಿಮಾನಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿನಿಮಾ ಮಂದಿರ ಸಿಬ್ಬಂದಿ ಸಂಕಷ್ಟಕ್ಕೆ ಮಿಡಿದ ಸುದೀಪ್ ಅಭಿಮಾನಿಗಳು

ಶಿವಮೊಗ್ಗ: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿಮಾನಿಗಳು ಕೊರೋನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಚಿತ್ರಮಂದಿರದ ಸಿಬ್ಬಂದಿಗೆ ದಿನಸಿ ಕಿಟ್ ವಿತರಿಸಿದ್ದಾರೆ.

ಸುಮಾರು ಮೂರು ತಿಂಗಳಿಂದ ಸಿನಿಮಾ ಮಂದಿರ ಬಂದ್ ಆಗಿ ಚಿತ್ರಮಂದಿರಗಳ ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಸುದೀಪ್ ಅಭಿಮಾನಿಗಳ ಬಳಗದಿಂದ ಚಿತ್ರಮಂದಿರದ ಸಿಬ್ಬಂದಿಗೆ ಕಿಟ್ ವಿತರಣೆ ಮಾಡಲಾಗಿದೆ.

ಕಿಚ್ಚ ಚಾರಿಟಬಲ್ ಟ್ರಸ್ಟ್ ವತಿಯಿಂದ ಶಿವಮೊಗ್ಗದ ಮಲ್ಲಿಕಾರ್ಜುನ ಚಿತ್ರಮಂದಿರ ಆವರಣದಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಚಿತ್ರಮಂದಿರಗಳ ನೌಕರರಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...