ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಪುತ್ರ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.
ರಾಮು ಕಣಗಾಲ್ ಅವರು ಮೃತಪಟ್ಟವರು. ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ರಾಮು ಕಣಗಾಲ್ ಅವರಿಗೆ 54 ವರ್ಷ ವಯಸ್ಸಾಗಿತ್ತು. 2 -3 ದಿನಗಳ ಹಿಂದೆ ಕೊರೋನಾ ಸೋಂಕು ತಗುಲಿದ್ದ ಹಿನ್ನೆಲೆಯಲ್ಲಿ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಭರತನಾಟ್ಯ ಕಲಾವಿದರಾಗಿದ್ದ ಅವರು ಕಣಗಾಲ್ ನೃತ್ಯಾಲಯ ಎಂಬ ನಾಟ್ಯ ಶಾಲೆ ನಡೆಸುತ್ತಿದ್ದರು.