ಬೆಂಗಳೂರು: ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ ನೆರವೇರಿಸಲಾಗುವುದು.
ಡಾ. ರಾಜಕುಮಾರ್ ಮತ್ತು ಪಾರ್ವತಮ್ಮ ರಾಜಕುಮಾರ್ ಸಮಾಧಿಯ ಪಕ್ಕದಲ್ಲಿ ಭಾನುವಾರ ನಟ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ ನೆರವೇರಿಸಲಾಗುವುದು. ಕಂಠೀರವ ಸ್ಟುಡಿಯೋದಲ್ಲಿ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆಗೆ ಕುಟುಂಬದವರು ಮತ್ತು ಅಧಿಕಾರಿಗಳು ತೆರಳಿದ್ದಾರೆ.
ಕುಟುಂಬದವರು ಮತ್ತು ಸರ್ಕಾರದ ತೀರ್ಮಾನದಂತೆ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಡಾ. ರಾಜಕುಮಾರ್ ಮತ್ತು ಪಾರ್ವತಮ್ಮ ರಾಜಕುಮಾರ್ ಸಮಾಧಿಯ ಪಕ್ಕದಲ್ಲಿ ಭಾನುವಾರ ನಟ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎನ್ನಲಾಗಿದೆ.