
ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ‘ಗಂಧದ ಗುಡಿ’ ಸಾಕ್ಷ್ಯಚಿತ್ರದ ಪ್ರೀ ರಿಲೀಸ್ ಇವೆಂಟ್ ‘ಪುನೀತ ಪರ್ವ’ ಕಾರ್ಯಕ್ರಮ ಅದ್ದೂರಿಯಾಗಿ ನಡೆದಿದೆ.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ‘ಗಂಧದ ಗುಡಿ’ಗೆ ತೆರಿಗೆ ವಿನಾಯಿತಿ ನೀಡುವುದಾಗಿ ಘೋಷಿಸಿದ್ದಾರೆ.
ಪ್ರಕೃತಿ ಮತ್ತು ಅರಣ್ಯ ಜಾಗೃತಿ ಕುರಿತು ಪುನೀತ್ ನಿರ್ಮಿಸಿದ ಕೊನೆಯ ಚಿತ್ರ ‘ಗಂಧದ ಗುಡಿ’ಗೆ ತೆರಿಗೆ ವಿನಾಯಿತಿ ಸೇರಿದಂತೆ ಸರ್ಕಾರದಿಂದ ಎಲ್ಲಾ ರೀತಿಯ ರಿಯಾಯಿತಿ ನೀಡಲಾಗುವುದು ನೀಡಲಾಗುವುದು. ನವೆಂಬರ್ 1 ರಂದು ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಲಾಗುವುದು. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮ ನಡೆಸಲಾಗುವುದು ಎಂದರು.