alex Certify BREAKING: ಖ್ಯಾತ ನಟ, ರಂಗಕರ್ಮಿ ಜಿ.ಕೆ. ಗೋವಿಂದರಾವ್ ಇನ್ನಿಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಖ್ಯಾತ ನಟ, ರಂಗಕರ್ಮಿ ಜಿ.ಕೆ. ಗೋವಿಂದರಾವ್ ಇನ್ನಿಲ್ಲ

ಹುಬ್ಬಳ್ಳಿ: ಲೇಖಕ, ರಂಗಕರ್ಮಿ, ನಟ ಜಿ.ಕೆ. ಗೋವಿಂದರಾವ್ ನಿಧನರಾಗಿದ್ದಾರೆ. ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಅವರಿಗೆ 84 ವರ್ಷ ವಯಸ್ಸಾಗಿತ್ತು. ಹುಬ್ಬಳ್ಳಿಯಲ್ಲಿ ಪುತ್ರಿ ಶ್ಯಾಮಲಾ ಮನೆಯಲ್ಲಿದ್ದ ಅವರು ನಿಧನರಾಗಿದ್ದು, ಬೆಳಗ್ಗೆ 8.30 ರ ವೇಳೆಗೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಪ್ರಾಧ್ಯಾಪಕರಾಗಿ, ರಂಗಭೂಮಿ ಕಲಾವಿದರಾಗಿ, ಚಿತ್ರನಟರಾಗಿ ಬಹುಮುಖ ಪ್ರತಿಭೆ ಹೊಂದಿದ್ದ ಜಿ.ಕೆ. ಗೋವಿಂದರಾವ್ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಹಿರಿಯ ಲೇಖಕ, ಚಿಂತಕ, ನಟ ಪ್ರೊ. ಜಿ.ಕೆ. ಗೋವಿಂದರಾವ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ನನ್ನ ಹಿತೈಷಿ, ಮಾರ್ಗದರ್ಶಕ ಮತ್ತು ಸ್ನೇಹಿತರಾಗಿದ್ದ ಪ್ರೊ. ಜಿಕೆಜಿ ಅವರಿಗೆ ಗೌರವ ನಮನಗಳು. ಅವರನ್ನು ಕಳೆದುಕೊಂಡ ಕುಟುಂಬದ ಸದಸ್ಯರು, ಶಿಷ್ಯರು, ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...