ಮುಂಬೈ: ಬಾಲಿವುಡ್ ಹಲವಾರು ಸೆಲೆಬ್ರಿಟಿಗಳಿಗೆ ಕೊರೋನಾ ಸೋಂಕು ತಗುಲಿ ಗುಣಮುಖರಾಗಿದ್ದಾರೆ. ನಟ ಅಕ್ಷಯ್ ಕುಮಾರ್ ಅವರಿಗೆ ಸೋಂಕು ತಗುಲಿದ ವರದಿ ಬಂದ ಬೆನ್ನಲ್ಲೇ ಮತ್ತೊಬ್ಬ ನಟ ಗೋವಿಂದ ಅವರಿಗೂ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಅವರು ಮನೆಯಲ್ಲಿ ಐಸೋಲೇಷನ್ ನಲ್ಲಿದ್ದಾರೆ. ವೈದ್ಯಕೀಯ ಚಿಕಿತ್ಸೆ, ಮಾರ್ಗದರ್ಶನ ಪಡೆದುಕೊಂಡಿದ್ದಾರೆ. ಪತ್ನಿ ಸುನೀತಾ ಸೋಂಕಿನಿಂದ ಚೇತರಿಸಿಕೊಂಡ ಕೆಲವು ದಿನಗಳ ನಂತರ ಗೋವಿಂದ ಅವರಿಗೆ ಕೊರೊನಾ ಸೋಂಕು ತಗುಲಿದೆ.
ಕೊರೋನಾ ಹಿನ್ನಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದೇವೆ. ಆದರೆ ರೋಗಲಕ್ಷಣಗಳು ಕಂಡುಬಂದಿದ್ದು ಪರೀಕ್ಷೆಯ ವೇಳೆ ಪಾಸಿಟಿವ್ ರಿಪೋರ್ಟ್ ಬಂದಿದೆ. ಮನೆಯಲ್ಲೇ ಐಸೋಲೇಷನ್ ನಲ್ಲಿ ಇರುವುದಾಗಿ ಗೋವಿಂದ ಹೇಳಿದ್ದಾರೆ.