ಬೆಂಗಳೂರು: ಚಿತ್ರಮಂದಿರಗಳಲ್ಲಿ ಶೇಕಡ 100 ರಷ್ಟು ಪ್ರೇಕ್ಷಕರ ಭರ್ತಿಗೆ ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ.
ಚಿತ್ರಮಂದಿರದ ಆವರಣದಲ್ಲಿ ಅಂತರ ಕಾಯ್ದುಕೊಳ್ಳಬೇಕು. ಕಂಟೇನ್ಮೆಂಟ್ ಜೋನ್ ಚಿತ್ರಮಂದಿರಗಳಲ್ಲಿ ಚಿತ್ರ ಪ್ರದರ್ಶನಕ್ಕೆ ಅವಕಾಶ ಇರುವುದಿಲ್ಲ. ಎಲ್ಲ ಪ್ರೇಕ್ಷಕರು ಕಡ್ಡಾಯವಾಗಿ ಮಾರ್ಕ್ ಮಾಸ್ಕ್ ಧರಿಸಬೇಕು. ವಿರಾಮದ ವೇಳೆ ಗುಂಪುಗುಂಪಾಗಿ ಸೇರುವಂತಿಲ್ಲ. ಮಲ್ಟಿಪ್ಲೆಕ್ಸ್ ಗಳಲ್ಲಿ ಒಂದೇ ಬಾರಿಗೆ ಇಂಟರ್ವೆಲ್ ಕೊಡುವಂತಿಲ್ಲ. ಥಿಯೇಟರ್ಗಳಲ್ಲಿ ಪ್ರೇಕ್ಷಕರು ಗುಂಪುಗುಂಪಾಗಿ ಪ್ರವೇಶಿಸುವಂತಿಲ್ಲ. ಪ್ರತಿಯೊಂದು ಪ್ರದರ್ಶನದ ಬಳಿಕ ಚಿತ್ರಮಂದಿರದಲ್ಲಿ ಸ್ಯಾನಿಟೈಸ್ ಮಾಡಬೇಕಿದೆ ಎಂದು ಹೇಳಲಾಗಿದೆ.