ಬೆಂಗಳೂರು: ಡಾಲಿ ಧನಂಜಯ್ ಅಭಿನಯದ ‘ಹೆಡ್ ಬುಷ್’ ಚಿತ್ರದಲ್ಲಿ ತಿಗಳರ ಪೇಟೆ ಕರಗ ಎಂದು ಬೇರೆ ಕರಗ ತೋರಿಸಿದ್ದಾರೆ ಎನ್ನುವ ದೂರು ಬಂದಿದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಬಾ.ಮಾ. ಹರೀಶ್ ತಿಳಿಸಿದ್ದಾರೆ.
ಬೆಂಗಳೂರು ಕರಗ ಸಮಿತಿ ಮತ್ತು ಧರ್ಮರಾಯಸ್ವಾಮಿ ದೇವಸ್ಥಾನದಿಂದ ದೂರು ಬಂದಿದ್ದು, ಶಿವಶಂಕರ ಬಗ್ಗೆ ಮಾತನಾಡಿರುವುದು ನೋವು ತಂದಿದೆ ಎಂದು ಹೇಳಿದ್ದಾರೆ. ಬೆಳಗ್ಗೆ 11:30ಕ್ಕೆ ಚಿತ್ರತಂಡವನ್ನು ವಾಣಿಜ್ಯ ಮಂಡಳಿಗೆ ಕರೆಸುತ್ತೇನೆ. ಚಿತ್ರತಂಡ ಮತ್ತು ಕರಗ ಸಮಿತಿ ಸದಸ್ಯರನ್ನು ಎದುರು ಬದುರು ಕೂರಿಸಿ ಮಾತುಕತೆಯ ಮೂಲಕ ಸಮಸ್ಯೆ ಇತ್ಯರ್ಥ ಮಾಡಿಕೊಳ್ಳಲು ಪ್ರಯತ್ನಿಸುತ್ತೇವೆ ಎಂದು ತಿಳಿಸಿದ್ದಾರೆ.