ಬೆಂಗಳೂರು: ರೈತರ ಪ್ರತಿಭಟನೆಯ ಬಗ್ಗೆ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದ ನಟಿ ಕಂಗನಾ ರಣಾವತ್ ವಿರುದ್ಧದ ಎಫ್ಐಆರ್ ಅನ್ನು ಹೈಕೋರ್ಟ್ ರದ್ದುಪಡಿಸಿದೆ.
ಹೈಕೋರ್ಟ್ ಪ್ರಕರಣವನ್ನು ರದ್ದುಪಡಿಸಿ ಜೆಎಂಎಫ್ಸಿ ಕೋರ್ಟ್ ಗೆ ಹಿಂತಿರುಗಿಸಿದೆ. ರೈತರ ಬಗ್ಗೆ ಕಂಗನಾ ರಣಾವತ್ ಆಕ್ಷೇಪಾರ್ಹ ಟ್ವೀಟ್ ಮಾಡಿದ ಬಗ್ಗೆ ವಕೀಲರಾದ ರಮೇಶ್ ನಾಯಕ್ ಅವರು ಖಾಸಗಿ ದೂರು ದಾಖಲಿಸಿದ್ದರು. ತುಮಕೂರಿನ ಜೆಎಂಎಫ್ಸಿ ಕೋರ್ಟ್ ತನಿಖೆಗೆ ಆದೇಶಿಸಿತ್ತು. ಪ್ರಕರಣ ರದ್ದು ಮಾಡಬೇಕೆಂದು ಕೋರಿ ಕಂಗನಾ ಹೈಕೋರ್ಟ್ ಮೆಟ್ಟಿಲೇರಿದ್ದರು.
ಮ್ಯಾಜಿಸ್ಟ್ರೇಟ್ ಆದೇಶದಲ್ಲಿ ಲೋಪವಿದ್ದ ಕಾರಣ ಜೆಎಂಎಫ್ಸಿ ಕೋರ್ಟ್ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ತಮ್ಮ ವಿರುದ್ಧ ತುಮಕೂರಿನಲ್ಲಿ ದಾಖಲಾದ ಪ್ರಕರಣದ ತನಿಖೆಗೆ ತಡೆ ನೀಡಬೇಕೆಂದು ಕಂಗನಾ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ, ಸೂಕ್ತ ರೀತಿಯಲ್ಲಿ ಮಾಹಿತಿ ಒದಗಿಸದ ಕಾರಣಕ್ಕೆ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದ್ದು, ಇಂದು ಎಫ್ಐಆರ್ ರದ್ದು ಮಾಡಿದೆ ಎನ್ನಲಾಗಿದೆ.