alex Certify ಅಬ್ಬಬ್ಬಾ….! ದಂಗಾಗಿಸುತ್ತೆ ಪ್ರತಿ ಇನ್​ಸ್ಟಾ ಪೋಸ್ಟ್​​ಗೆ ಭಾರತೀಯ ಸೆಲೆಬ್ರಿಟಿಗಳು ಪಡೆಯುವ ಸಂಭಾವನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಬ್ಬಬ್ಬಾ….! ದಂಗಾಗಿಸುತ್ತೆ ಪ್ರತಿ ಇನ್​ಸ್ಟಾ ಪೋಸ್ಟ್​​ಗೆ ಭಾರತೀಯ ಸೆಲೆಬ್ರಿಟಿಗಳು ಪಡೆಯುವ ಸಂಭಾವನೆ

ಹಾಪರ್​ ಹೆಚ್​ಕ್ಯೂ 2021ನೇ ಸಾಲಿನ ಇನ್​​ಸ್ಟಾಗ್ರಾಂ ಶ್ರೀಮಂತರ ಪಟ್ಟಿಯನ್ನ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಕ್ರಿಸ್ಟಿಯಾನೋ ರೋನಾಲ್ಡೋ ಮೊದಲ ಸ್ಥಾನವನ್ನ ಪಡೆದುಕೊಂಡಿದ್ದಾರೆ. ಈ ಪೋರ್ಚುಗೀಸ್​ ಫುಟ್​ಬಾಲ್​ ಆಟಗಾರ ತಮ್ಮ ಪ್ರತಿ ಇನ್​ಸ್ಟಾಗ್ರಾಂ ಪೋಸ್ಟ್​​ಗೆ ಬರೋಬ್ಬರಿ 11 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರಂತೆ..!

ಇನ್ನೊಂದು ವಿಶೇಷ ಅಂದರೆ ಬ್ರಿಟನ್​ ಮೂಲದ ಸಾಮಾಜಿಕ ಜಾಲತಾಣ ನಿರ್ವಹಣಾ ಕಂಪನಿ ಬಿಡುಗಡೆ ಮಾಡಿರುವ ಈ ಪಟ್ಟಿಯಲ್ಲಿ ಟಾಪ್​ 20 ಸ್ಥಾನದಲ್ಲಿ ಭಾರತೀಯರೂ ಸಹ ಸ್ಥಾನ ಪಡೆದಿದ್ದಾರೆ. ಟೀಂ ಇಂಡಿಯಾ ನಾಯಕ ವಿರಾಟ್​ ಕೊಹ್ಲಿ ಈ ಶ್ರೀಮಂತರ ಪಟ್ಟಿಯಲ್ಲಿ 19ನೇ ಸ್ಥಾನಕ್ಕೆ ಭಾಜನರಾಗಿದ್ದಾರೆ. ಅದೇ ರೀತಿ ನಟಿ ಪ್ರಿಯಾಂಕಾ ಛೋಪ್ರಾ ಈ ಪಟ್ಟಿಯಲ್ಲಿ 27ನೇ ಸ್ಥಾನದಲ್ಲಿದ್ದಾರೆ.

ಹಾಪರ್​ ಹೆಚ್​ಕ್ಯೂ ನೀಡಿರುವ ಮಾಹಿತಿಯ ಪ್ರಕಾರ ವಿರಾಟ್​ ಕೊಹ್ಲಿ ತಮ್ಮ ಪ್ರತಿ ಇನ್​ಸ್ಟಾಗ್ರಾಂ ಪೋಸ್ಟ್​​ಗೆ ಸರಿ ಸುಮಾರು 5 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರಂತೆ. ಕಳೆದ ವರ್ಷ ಇದೇ ಪಟ್ಟಿಯಲ್ಲಿ 23ನೇ ಸ್ಥಾನದಲ್ಲಿದ್ದ ಕೊಹ್ಲಿ ಈ ಬಾರಿ ಸಂಭಾವನೆ ಏರಿಕೆ ಮೂಲಕ 19ನೇ ಸ್ಥಾನಕ್ಕೆ ಜಿಗಿದಿದ್ದಾರೆ.

ಅದೇ ರೀತಿ ನಟಿ ಪ್ರಿಯಾಂಕಾ ಚೋಪ್ರಾ ತಮ್ಮ ಪ್ರತಿ ಪೋಸ್ಟ್​​ಗೆ 3 ಕೋಟಿ ರೂಪಾಯಿ ಸಂಭಾವನೆಯನ್ನ ಪಡೆಯುತ್ತಾರೆ. ಇನ್​ಸ್ಟಾಗ್ರಾಂನಲ್ಲಿ 65 ಮಿಲಿಯನ್ ಫಾಲೋವರ್ಸ್ ಹೊಂದಿರುವ ಈ ನಟಿ ಯಾವುದೇ ವಸ್ತುಗಳನ್ನ ಮಾರುಕಟ್ಟೆ ಮಾಡುವ ಸಲುವಾಗಿ ಹಾಕುವ ಪೋಸ್ಟ್​ಗಳಿಗೆ ಇಷ್ಟು ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...