alex Certify ಅಲ್ಲು ಅರ್ಜುನ್ ಹುಟ್ಟುಹಬ್ಬಕ್ಕೆ ಧಮಾಕ….! ಪುಷ್ಪ ಟೀಸರ್‌ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಲ್ಲು ಅರ್ಜುನ್ ಹುಟ್ಟುಹಬ್ಬಕ್ಕೆ ಧಮಾಕ….! ಪುಷ್ಪ ಟೀಸರ್‌ ಬಿಡುಗಡೆ

ಸ್ಟೈಲಿಶ್‌ ಸ್ಟಾರ್‌ ಅಭಿಮಾನಿಗಳಿಗೆ ಡಬಲ್‌ ಧಮಾಕಾ ಸಿಗ್ತಿದೆ. ಏಪ್ರಿಲ್‌ 8ರಂದು ಅಲ್ಲು ಅರ್ಜುನ್‌ ಹುಟ್ಟು ಹಬ್ಬ ಆಚರಿಸಿಕೊಳ್ತಿದ್ದಾರೆ.  ಹುಟ್ಟು ಹಬ್ಬದ ಸಂದರ್ಭದಲ್ಲಿ ಅಲ್ಲು ಅರ್ಜುನ್ ಅಭಿನಯದ ಪುಷ್ಪ ಚಿತ್ರದ ಟೀಸರ್‌  ಬಿಡುಗಡೆಯಾಗಿದೆ.

ಮೈತ್ರಿ ಮೂವೀಸ್ ಬ್ಯಾನರ್ ಅಡಿಯಲ್ಲಿ ಪುಷ್ಪ ಚಿತ್ರ ಮೂಡಿ ಬಂದಿದೆ. ಚಿತ್ರದಲ್ಲಿ ಅಲ್ಲು ಅರ್ಜುನ್‌ ಜೊತೆ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದಾರೆ. ಸುಕುಮಾರ್‌ ನಿರ್ದೇಶನದ ಪುಷ್ಪ ಸಿನಿಮಾ ಆಗಸ್ಟ್‌ 13 ರಂದು ಕನ್ನಡ, ತೆಲುಗು ಸೇರಿ ಐದು ಭಾಷೆಗಳಲ್ಲಿ ತೆರೆಗೆ ಬರಲಿದೆ. ಟೀಸರ್ ಬಿಡುಗಡೆ ನಂತ್ರ ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಾಗಿದೆ.

ಈ ಚಿತ್ರದಲ್ಲಿ ದಕ್ಷಿಣದ ಪ್ರತಿಭಾವಂತ ನಟರಾದ ಫಹದ್‌ ಫಸಲ್‌, ಧನಂಜಯ ಸಹ ಅಭಿನಯಿಸಿದ್ದಾರೆ. ಅಲ್ಲು ಅರ್ಜುನ್‌ ಮತ್ತು ಸುಕುಮಾರ್‌ ಕಾಂಬಿನೇಶನ್‌ನಲ್ಲಿ ಬಂದಿದ್ದ ಆರ್ಯ, ಆರ್ಯ-2 ಚಿತ್ರಗಳು ಸೂಪರ್‌ ಹಿಟ್‌ ಆಗಿದ್ದವು. ಈಗ ಈ ಚಿತ್ರಕ್ಕೆ ಅಭಿಮಾನಿಗಳು ಯಾವ ರೀತಿ ಪ್ರತಿಕ್ರಿಯೆ ನೀಡ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...