alex Certify BREAKING NEWS: ದುಬೈಗೆ ಹೊರಟಿದ್ದ ನಟಿ ಜಾಕ್ವೆಲಿನ್ ಫೆರ್ನಾಂಡೀಸ್ ಗೆ ಬಿಗ್ ಶಾಕ್; ಮುಂಬೈ ಏರ್ ಪೋರ್ಟ್ ನಲ್ಲೇ ತಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ದುಬೈಗೆ ಹೊರಟಿದ್ದ ನಟಿ ಜಾಕ್ವೆಲಿನ್ ಫೆರ್ನಾಂಡೀಸ್ ಗೆ ಬಿಗ್ ಶಾಕ್; ಮುಂಬೈ ಏರ್ ಪೋರ್ಟ್ ನಲ್ಲೇ ತಡೆ

ಮುಂಬೈ: ದುಬೈಗೆ ತೆರಳುತ್ತಿದ್ದ ಖ್ಯಾತ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ಮುಂಬೈ ಏರ್ ಪೋರ್ಟ್ ನಲ್ಲಿ ಅಧಿಕಾರಿಗಳು ತಡೆ ನೀಡಿದ್ದಾರೆ.

ಲುಕೌಟ್ ನೋಟೀಸ್ ಜಾರಿ ಹಿನ್ನೆಲೆಯಲ್ಲಿ ಜಾಕ್ವೆಲಿನ್ ಫೆರ್ನಾಂಡೀಸ್ ಪ್ರಯಾಣಕ್ಕೆ ತಡೆ ನೀಡಲಾಗಿದೆ.

200 ಕೋಟಿ ರೂ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿ ಸುಕೇಶ್ ಚಂದ್ರಶೇಖರ್, ಅವರ ಪತ್ನಿ ನಟಿ ಲೀನಾ ಮರಿಯಾ ಪಾಲ್ ಮತ್ತು ಇತರ ಆರು ಮಂದಿ ವಿರುದ್ಧ ಜಾರಿ ನಿರ್ದೇಶನಾಲಯವು 7,000 ಪುಟಗಳ ಆರೋಪಪಟ್ಟಿ ಸಲ್ಲಿಸಿದೆ. ಆರೋಪ ಪಟ್ಟಿಯ ಪ್ರಕಾರ, ನಟಿ ಜಾಕ್ವೆಲಿನ್ ಫರ್ನಾಂಡೀಸ್‌ಗೆ 52 ಲಕ್ಷ ರೂ. ಮೌಲ್ಯದ ಕುದುರೆ ಮತ್ತು 9 ಲಕ್ಷ ರೂ. ಮೌಲ್ಯದ ಪರ್ಷಿಯನ್ ಬೆಕ್ಕನ್ನು ಉಡುಗೊರೆಯಾಗಿ ನೀಡಿದ್ದಾಗಿ ಚಂದ್ರಶೇಖರ್ ವಿಚಾರಣೆಯ ವೇಳೆ ಬಹಿರಂಗಪಡಿಸಿದ್ದಾರೆ.

ಜಾಕ್ವೆಲಿನ್ ಫೆರ್ನಾಂಡೀಸ್‌ಗೆ ಲುಕೌಟ್ ನೋಟಿಸ್ ಜಾರಿ ಮಾಡಿದ ಹಿನ್ನಲೆಯಲ್ಲಿ ದೇಶ ಬಿಟ್ಟು ಹೋಗಲು ತಡೆ ನೀಡಲಾಗಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...