alex Certify BIG BREAKING: ಅಭಿನಯ ಶಾರದೆ, ಹಿರಿಯ ನಟಿ ಜಯಂತಿ ವಿಧಿವಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಅಭಿನಯ ಶಾರದೆ, ಹಿರಿಯ ನಟಿ ಜಯಂತಿ ವಿಧಿವಶ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ, ಅಭಿನಯ ಶಾರದೆ ಜಯಂತಿ ವಿಧಿವಶರಾಗಿದ್ದಾರೆ. 500 ಕ್ಕೂ ಹೆಚ್ಚು ಚಿತ್ರಗಳಲ್ಲಿ ಅವರು ಅಭಿನಯಿಸಿದ್ದಾರೆ.

1968 ರಲ್ಲಿ ಜೇನುಗೂಡು ಚಿತ್ರದ ಮೂಲಕ ಚಿತ್ರರಂಗಕ್ಕೆ ಪ್ರವೇಶಿಸಿದ ಜಯಂತಿ ಡಾ. ರಾಜ್ ಕುಮಾರ್ ಸೇರಿದಂತೆ ಹಲವು ನಟರೊಂದಿಗೆ ಅಭಿನಯಿಸಿದ್ದಾರೆ. ಕನ್ನಡದಲ್ಲಿ 160 ಕ್ಕೂ ಸೇರಿ 6 ಭಾಷೆಗಳಲ್ಲಿ ನಟಿಸಿದ್ದಾರೆ.

ಡಾ. ರಾಜಕುಮಾರ್ ಜೊತೆಗೆ 45 ಚಿತ್ರಗಳಲ್ಲಿ ಜಯಂತಿ ಅಭಿನಯಿಸಿದ್ದರು. 1950 ರಲ್ಲಿ ಬಳ್ಳಾರಿಯಲ್ಲಿ ಜನಿಸಿದ್ದ ಅವರಿಗೆ

76 ವರ್ಷದ ವಯಸ್ಸಾಗಿತ್ತು. ಜಯಂತಿ ಅವರು ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ ಸೇರಿದಂತೆ ಆರು ಭಾಷೆಗಳಲ್ಲಿ 500 ಕ್ಕೂ ಹೆಚ್ಚು ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. ಅವರ ಮೂಲ ಹೆಸರು ಕಮಲಾ ಕುಮಾರಿ.

ಕನ್ನಡ ಚಿತ್ರರಂಗದ ಪ್ರಮುಖ ನಾಯಕಿಯರಲ್ಲಿ ಒಬ್ಬರಾದ ಜಯಂತಿ 1968 ರಲ್ಲಿ ತೆರೆ ಕಂಡ ವೈ,ಅರ್, ಸ್ವಾಮಿ ನಿರ್ದೇಶನದ ‘ಜೇನು ಗೂಡು’ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ್ದರು. ಅದಕ್ಕಿಂತ ಮುನ್ನ ‘ಜಗದೇಕ ವೀರನ ಕಥೆ’ ಚಿತ್ರದಲ್ಲಿ ಸಣ್ಣ ಪಾತ್ರವೊಂದರಲ್ಲಿ ಅಭಿನಯಿಸಿದ್ದಾರೆ. ಒಟ್ಟು ಆರು ಭಾಷೆಯ ಚಿತ್ರಗಳಲ್ಲಿ ಅಭಿನಯಿಸಿರುವ ಜಯಂತಿ ಕನ್ನಡದ 190 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ನಿರ್ಮಾಪಕಿ, ನಿರ್ದೇಶಕಿಯೂ ಆಗಿರುವ ಅವರು 1965 ರ ‘ಮಿಸ್ ಲೀಲಾವತಿ’ ಚಿತ್ರದ ಅಭಿನಯಕ್ಕಾಗಿ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ.

‘ಎರಡು ಮುಖ’, ‘ಮನಸ್ಸಿನಂತೆ ಮಾಂಗಲ್ಯ’, ‘ಧರ್ಮ ದಾರಿ ತಪ್ಪಿತು’, ‘ಮಸಣದ ಹೂವು’, ‘ಆನಂದ್’  ಚಿತ್ರಗಳ ಅಭಿನಯಕ್ಕಾಗಿ 5 ಬಾರಿ ರಾಜ್ಯ ಪ್ರಶಸ್ತಿ ಗಳಿಸಿದ್ದಾರೆ. ‘ಎಡಕಲ್ಲು ಗುಡ್ಡದ ಮೇಲೆ’ ಚಿತ್ರದಲ್ಲಿ ಜಯಂತಿ ವಿಶಿಷ್ಟ ಅಭಿನಯ ನೀಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...