
ನಟಿ ಕಾಜಲ್ ಅಗರ್ ವಾಲ್ ಔರಂಗಾಬಾದ್ ಮೂಲದ ಉದ್ಯಮಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಬಾಲಿವುಡ್ ಚಿತ್ರದ ಮೂಲಕ ಬೆಳ್ಳಿತೆರೆಗೆ ಪ್ರವೇಶಿಸಿದರೂ ಕಾಲಿವುಡ್ ಮತ್ತು ಟಾಲಿವುಡ್ ನಲ್ಲಿ ಭದ್ರವಾಗಿ ನೆಲೆ ಊರಿರುವ ಕಾಜಲ್ ಅಗರ್ ವಾಲ್ ಹಲವು ಬಿಗ್ ಸ್ಟಾರ್ ಗಳೊಂದಿಗೆ ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿ ಪ್ರೇಕ್ಷಕರಿಂದ ಸೈ ಎನಿಸಿಕೊಂಡಿದ್ದಾರೆ.
ಶೀಘ್ರವೇ ಮದುವೆಯಾಗುತ್ತಿದ್ದೇನೆ ಎಂದು ಕಳೆದ ವರ್ಷ ಹೇಳಿದ್ದ ಕಾಜಲ್ ಅಗರ್ ವಾಲ್ ಔರಂಗಬಾದ್ ಮೂಲದ ಖ್ಯಾತ ಉದ್ಯಮಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂದು ಹೇಳಲಾಗಿದೆ.
ಮೆಗಾಸ್ಟಾರ್ ಚಿರಂಜೀವಿ ಅಭಿನಯದ ‘ಆಚಾರ್ಯ’ ಮತ್ತು ಕಮಲ್ ಹಾಸನ್ ಅಭಿನಯದ ‘ಇಂಡಿಯನ್ 2’ ಚಿತ್ರದಲ್ಲಿ ನಾಯಕಿಯಾಗಿರುವ ಕಾಜಲ್ ಹಲವಾರು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಬಹುಬೇಡಿಕೆಯ ನಟಿಯಾಗಿರುವಾಗಲೇ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ತೀರ್ಮಾನಿಸಿದ್ದಾರೆ ಎಂದು ಹೇಳಲಾಗಿದೆ.