alex Certify BREAKING NEWS: ಸೂಪರ್ ಸ್ಟಾರ್ ರಜನಿಕಾಂತ್, ಕಮಲ್ ಹಾಸನ್ ಮತದಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಸೂಪರ್ ಸ್ಟಾರ್ ರಜನಿಕಾಂತ್, ಕಮಲ್ ಹಾಸನ್ ಮತದಾನ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಗೆ ಇಂದು ಒಂದೇ ಹಂತದಲ್ಲಿ ಮತದಾನ ನಡೆದಿದೆ. ರಾಜ್ಯಾದ್ಯಂತ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಸೂಪರ್ ಸ್ಟಾರ್ ರಜನಿಕಾಂತ್, ಕಮಲ್ ಹಾಸನ್ ಅವರು ಮತದಾನ ಮಾಡಿದ್ದಾರೆ.

ರಜನಿಕಾಂತ್ ಬೆಳ್ಳಂಬೆಳಗ್ಗೆ ಚೆನ್ನೈನ ಥೌಸಂಡ್ ಲೈಟ್ಸ್ ವಿಧಾನಸಭಾ ಕ್ಷೇತ್ರದ ಸ್ಟೆಲ್ಲಾ ಮೇರಿಸ್ ಮತಗಟ್ಟೆಯಲ್ಲಿ ಮತದಾನ ಮಾಡಿದ್ದಾರೆ.

ಮಕ್ಕಳ ನೀಧಿ ಮಯ್ಯುಂ ಪಕ್ಷದ ಮುಖ್ಯಸ್ಥ ಹಾಗೂ ನಟ ಕಮಲಹಾಸನ್ ಅವರು ತಮ್ಮ ಪುತ್ರಿಯರಾದ ಶ್ರುತಿ ಹಾಸನ್ ಮತ್ತು ಅಕ್ಷರ ಹಾಸನ್ ಅವರೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದಾರೆ. ಚೆನ್ನೈನ ತೇಯಾನಮ್ ಪೇಟೆ ಪ್ರೌಢಶಾಲೆ ಮತಗಟ್ಟೆಯಲ್ಲಿ ಕಮಲ್ ಹಾಸನ್ ಮತದಾನ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...