alex Certify ತಮಿಳುನಾಡು ವಿಧಾನಸಭೆ ಚುನಾವಣೆಗೆ ಮುನ್ನವೇ ಕಮಲ್ ಹಾಸನ್ ಗೆ ಸಿಹಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಮಿಳುನಾಡು ವಿಧಾನಸಭೆ ಚುನಾವಣೆಗೆ ಮುನ್ನವೇ ಕಮಲ್ ಹಾಸನ್ ಗೆ ಸಿಹಿ ಸುದ್ದಿ

ಚೆನ್ನೈ: ಖ್ಯಾತ ನಟ ಕಮಲ್ ಹಾಸನ್ ಅವರಿಗೆ ಬ್ಯಾಟರಿ ಟಾರ್ಚ್ ಲೈಟ್ ಚಿಹ್ನೆಯನ್ನು ಚುನಾವಣಾ ಆಯೋಗ ನೀಡಿದೆ. ಕಮಲ್ ಅವರ ‘ಮಕ್ಕಳ್ ನೀದಿ ಮಯ್ಯುಂ’ ಪಕ್ಷಕ್ಕೆ ಟಾರ್ಚ್ ಲೈಟ್ ಚಿಹ್ನೆಯ ವಿಚಾರವಾಗಿ ಕೋರ್ಟ್ ಮೆಟ್ಟಿಲೇರಿದ್ದರು.

ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ ನಟ ಕಮಲ್ ಹಾಸನ್ ಅವರಿಗೆ ಕೇಂದ್ರ ಚುನಾವಣಾ ಟಾರ್ಚ್ ಲೈಟ್ ಚಿಹ್ನೆಯನ್ನು ನೀಡಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅವರ ಪಕ್ಷ ತಮಿಳುನಾಡಿನ 234 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ.

2019 ರ ಲೋಕಸಭೆ ಚುನಾವಣೆಯಲ್ಲಿ ಇದೇ ಚಿಹ್ನೆಯಡಿ ಪಕ್ಷದ ಅಭ್ಯರ್ಥಿಗಳು ಕಣಕ್ಕಿಳಿದಿದ್ದರು. ವಿಧಾನಸಭೆ ಚುನಾವಣೆಗೂ ಇದೇ ಚಿಹ್ನೆ ನೀಡಬೇಕೆಂದು ಮನವಿ ಮಾಡಲಾಗಿತ್ತು. ಆದರೆ, ಟಾರ್ಚ್ ಲೈಟ್ ಚಿಹ್ನೆಯನ್ನು ಮತ್ತೊಂದು ಪಕ್ಷಕ್ಕೆ ಚುನಾವಣಾ ಆಯೋಗ ನೀಡಿದ್ದು, ಇದನ್ನು ಪ್ರಶ್ನಿಸಿ ಅವರು ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...