alex Certify ‘ಅವಹೇಳನಕಾರಿ’ ಹೇಳಿಕೆ ನೀಡಿದ ಖ್ಯಾತ ನಟಿ ಕಂಗನಾ ರನೌತ್ ವಿರುದ್ಧ ಎಫ್ಐಆರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಅವಹೇಳನಕಾರಿ’ ಹೇಳಿಕೆ ನೀಡಿದ ಖ್ಯಾತ ನಟಿ ಕಂಗನಾ ರನೌತ್ ವಿರುದ್ಧ ಎಫ್ಐಆರ್

ಮುಂಬೈ: ಸಿಖ್ ಸಮುದಾಯದ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿದ ಆರೋಪದ ಮೇಲೆ ಮುಂಬೈನಲ್ಲಿ ಬಾಲಿವುಡ್ ನಟಿ ಕಂಗನಾ ರನೌತ್ ವಿರುದ್ಧ ಪೊಲೀಸರು ಮಂಗಳವಾರ ಎಫ್‌ಐಆರ್ ದಾಖಲಿಸಿದ್ದಾರೆ.

ದೆಹಲಿ ಸಿಖ್ ಗುರುದ್ವಾರ ನಿರ್ವಹಣಾ ಸಮಿತಿ(ಡಿಎಸ್‌ಜಿಎಂಸಿ) ಕಂಗನಾ ವಿರುದ್ಧ ದೂರು ಸಲ್ಲಿಸಿದ ಒಂದು ದಿನದ ನಂತರ ಉಪನಗರ ಖಾರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಭಾರತೀಯ ದಂಡ ಸಂಹಿತೆಯ(IPC) ಸೆಕ್ಷನ್ 295A(ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಅದರ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಯಾವುದೇ ವರ್ಗದ ಧಾರ್ಮಿಕ ಭಾವನೆಗಳನ್ನು ಆಕ್ರೋಶಗೊಳಿಸುವ ಉದ್ದೇಶದಿಂದ) ಅಡಿ ಕೇಸ್ ದಾಖಲಾಗಿದೆ.

ಸೋಮವಾರ ದೂರು ಸಲ್ಲಿಸಿದ ಡಿಎಸ್‌ಜಿಎಂಸಿ ನಿಯೋಗದ ಭಾಗವಾಗಿ ಮುಂಬೈ ಮೂಲದ ಉದ್ಯಮಿ ಅಮರಜೀತ್ ಸಿಂಗ್ ಸಂಧು ಅವರು ದೂರು ನೀಡಿದ್ದಾರೆ.

ತಮ್ಮ ಸಮುದಾಯದ ವಿರುದ್ಧ ಕಂಗನಾ ಅವಹೇಳನಕಾರಿ ಹೇಳಿಕೆಗಳನ್ನು Instagram ನಲ್ಲಿ ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಕಂಗನಾ ರನೌತ್ ದೆಹಲಿಯಲ್ಲಿನ ರೈತರ(ಕಿಸಾನ್ ಮೋರ್ಚಾ) ಪ್ರತಿಭಟನೆಯನ್ನು ಖಲಿಸ್ತಾನಿ ಚಳವಳಿ ಎಂದು ಟೀಕಿಸಿದ್ದರಲ್ಲದೇ, ಸಿಖ್ ಸಮುದಾಯವನ್ನು ಖಲಿಸ್ತಾನಿ ಭಯೋತ್ಪಾದಕರು ಎಂದು ಹೆಸರಿಸಿದ್ದರು ಎಂದು ದೂರಿನಲ್ಲಿ DSGMC ಉಲ್ಲೇಖಿಸಿದೆ.

ಅವರು 1984 ರ ಸಿಖ್ ವಿರೋಧಿ ದಂಗೆ ಮತ್ತು ಆಗಿನ ಪ್ರಧಾನಿ ಇಂದಿರಾ ಗಾಂಧಿಯವರ ಬಗ್ಗೆಯೂ ಉಲ್ಲೇಖಿಸಿದ್ದಾರೆ. ಪೋಸ್ಟ್‌ ನಲ್ಲಿ, ಸಿಖ್ ಸಮುದಾಯದ ವಿರುದ್ಧ ಅತ್ಯಂತ ಅವಹೇಳನಕಾರಿ ಮತ್ತು ಅವಮಾನಕರ ಭಾಷೆಯನ್ನು ಬಳಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಇದು ಅತ್ಯಂತ ಅವಮಾನಕರ, ಅಗೌರವ ಮತ್ತು ಅವಹೇಳನಕಾರಿಯಾಗಿದೆ, ಇದು ಪ್ರಪಂಚದಾದ್ಯಂತ ನೆಲೆಸಿರುವ ಸಿಖ್ ಸಮುದಾಯದ ಭಾವನೆಗಳನ್ನು ಘಾಸಿಗೊಳಿಸಿದೆ ಎಂದು ಹೇಳಿದ್ದು, ಕಂಗನಾ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...