ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ನಟಿ ರಾಗಿಣಿ ದ್ವಿವೇದಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಕೊನೆಗೂ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ 140 ದಿನಗಳಿಂದ ಕಸ್ಟಡಿಯಲ್ಲಿದ್ದ ನಟಿ ರಾಗಿಣಿ ದ್ವಿವೇದಿ, ಪರಪ್ಪನ ಅಗ್ರಹಾರ ಜೈಲಿನಲ್ಲಿ ಸೆರೆವಾಸ ಅನುಭವಿಸಿದ್ದರು. ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದ ನಟಿ ಸಂಜನಾ ಸೇರಿದಂತೆ ಹಲವು ಪ್ರಮುಖ ಆರೋಪಿಗಳಿಗೆ ಈಗಾಗಲೇ ಜಾಮೀನು ಮಂಜೂರಾಗಿತ್ತು. ಆದರೆ ರಾಗಿಣಿಗೆ ಹೈಕೋರ್ಟ್ ಜಾಮೀನು ನೀಡಲು ನಿರಾಕರಿಸಿತ್ತು.
ಈ ಹಿನ್ನೆಲೆಯಲ್ಲಿ ರಾಗಿಣಿ ಪರ ವಕೀಲರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಸುಪ್ರೀಂ ಕೋರ್ಟ್ ರಾಗಿಣಿಗೆ ಜಾಮೀನು ಮಂಜೂರು ಮಾಡಿದ್ದು, ಜೈಲು ಹಕ್ಕಿಯಾಗಿದ್ದ ರಾಗಿಣಿಗೆ ಕೊನೆಗೂ ಬಿಡುಗಡೆ ಭಾಗ್ಯ ಸಿಕ್ಕಿದೆ.