
ಖ್ಯಾತ ನಿರ್ದೇಶಕ ದಿನೇಶ್ ಬಾಬು ನಿರ್ದೇಶನದ ಶಾನ್ವಿ ಶ್ರೀವಾಸ್ತವ ನಟನೆಯ ‘ಕಸ್ತೂರಿ ಮಹಲ್’ ಚಿತ್ರದ ಟೀಸರ್ ಅನ್ನು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರಿಲೀಸ್ ಮಾಡುವ ಮೂಲಕ ಚಿತ್ರಕ್ಕೆ ಶುಭ ಹಾರೈಸಿದ್ದಾರೆ.
ದಿನೇಶ್ ಬಾಬು ನಿರ್ದೇಶನದ 50ನೇ ಸಿನಿಮಾ ಇದಾಗಿದ್ದು, ಶಾನ್ವಿ ಶ್ರೀವಾತ್ಸವ ಹಾಗೂ ಸ್ಕಂದ, ಶ್ರುತಿ ಪ್ರಕಾಶ್, ರಂಗಾಯಣ ರಘು, ನೀನಾಸಂ ಅಶ್ವತ್ ಸೇರಿದಂತೆ ಅನೇಕ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಇದೊಂದು ಹಾರರ್ ಥ್ರಿಲ್ಲರ್ ಕಥೆಯನ್ನು ಒಳಗೊಂಡಿರುವ ಸಿನಿಮಾವಾಗಿದೆ.