alex Certify ಬರ್ತಡೇ ಸಂಭ್ರಮದಲ್ಲಿ ರಾಕಿಂಗ್ ಸ್ಟಾರ್ ಯಶ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬರ್ತಡೇ ಸಂಭ್ರಮದಲ್ಲಿ ರಾಕಿಂಗ್ ಸ್ಟಾರ್ ಯಶ್

ಬೆಂಗಳೂರು: ‘ಕೆಜಿಎಫ್’ ಮೂಲಕ ಭಾರತೀಯ ಚಿತ್ರರಂಗದ ಸ್ಟಾರ್ ಆದ ನಟ ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

ಕೊರೋನಾ ಕಾರಣದಿಂದಾಗಿ ಮನೆಯಲ್ಲಿಯೇ ಕುಟುಂಬದವರೊಂದಿಗೆ ಹುಟ್ಟುಹಬ್ಬ ಆಚರಿಸಲಿದ್ದಾರೆ. ಇಂದು ಬಹುನಿರೀಕ್ಷಿತ ‘ಕೆಜಿಎಫ್ ಚಾಪ್ಟರ್ 2’ ಫೋಸ್ಟರ್ ಬಿಡುಗಡೆ ಹಾಗೂ ಹೊಸ ಚಿತ್ರದ ಘೋಷಣೆ ಮಾಡುವ ಸಾಧ್ಯತೆ ಇದೆ.

ಕೊರೋನಾ ಸೋಂಕು, ಕರ್ಫ್ಯೂ ಇಲ್ಲದಿದ್ದರೆ ನೆಚ್ಚಿನ ನಟನ ಜನ್ಮದಿನವನ್ನು ವಿಶೇಷ ಕಾರ್ಯಕ್ರಮಗಳ ಮೂಲ ಅದ್ದೂರಿಯಾಗಿ ಆಚರಿಸಲು ಅಭಿಮಾನಿಗಳು ಸಜ್ಜಾಗಿದ್ದರು. ಆದರೆ, ಕೊರೋನಾ ಕಾರಣದಿಂದಾಗಿ ಅವಕಾಶ ಸಿಕ್ಕಿಲ್ಲ. ಸಾಮಾಜಿಕ ಜಾಲತಾಣಗಳ ಮೂಲಕ ಯಶ್ ಅವರಿಗೆ ಅಭಿಮಾನಿಗಳು ಶುಭಾಶಯ ಹೇಳಿದ್ದಾರೆ.

ಕೊರೋನಾ ಇಲ್ಲದಿದ್ದರೆ ಈ ವೇಳೆಗಾಗಲೇ ‘ಕೆಜಿಎಫ್ ಚಾಪ್ಟರ್ 2’ ಬಿಡುಗಡೆಯಾಗಬೇಕಿತ್ತು. ಚಿತ್ರದ ಕುರಿತಾದ ನಿರೀಕ್ಷೆ, ಕುತೂಹಲ ಭಾರೀ ಹೆಚ್ಚಾಗಿದೆ. ಯಶ್, ಸಂಜಯ್ ದತ್, ರವಿನಾ ಟಂಡನ್, ಪ್ರಕಾಶ್ ರೈ ಮೊದಲಾದವರು  ‘ಕೆಜಿಎಫ್ ಚಾಪ್ಟರ್ 2’ನಲ್ಲಿ ಅಭಿನಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...