alex Certify ನಿರೀಕ್ಷೆಗೂ ಮೀರಿದ ಕಲೆಕ್ಷನ್ ಮಾಡಿದ ‘ಕೆಜಿಎಫ್ ಚಾಪ್ಟರ್ 2’: 26 ನೇ ದಿನಕ್ಕೆ 1154 ಕೋಟಿ ರೂ. ಗಳಿಕೆ, ಅತಿಹೆಚ್ಚು ಗಳಿಕೆ ಕಂಡ ಭಾರತದ 3 ನೇ ಚಿತ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿರೀಕ್ಷೆಗೂ ಮೀರಿದ ಕಲೆಕ್ಷನ್ ಮಾಡಿದ ‘ಕೆಜಿಎಫ್ ಚಾಪ್ಟರ್ 2’: 26 ನೇ ದಿನಕ್ಕೆ 1154 ಕೋಟಿ ರೂ. ಗಳಿಕೆ, ಅತಿಹೆಚ್ಚು ಗಳಿಕೆ ಕಂಡ ಭಾರತದ 3 ನೇ ಚಿತ್ರ

ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆಜಿಎಫ್ ಚಾಪ್ಟರ್ 2’ ನಿರೀಕ್ಷೆಗೂ ಮೀರಿದ ಕಲೆಕ್ಷನ್ ಮಾಡಿದೆ. ಗಳಿಕೆಯಲ್ಲಿ ಅನೇಕ ದಾಖಲೆಗಳನ್ನು ಹಿಂದಿಕ್ಕಿದ ‘ಕೆಜಿಎಫ್ ಚಾಪ್ಟರ್ 2’ 26 ನೇ ದಿನಕ್ಕೆ 1154 ಕೋಟಿ ರೂ. ಗಳಿಸಿದೆ.

ಈಗ ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ ನಲ್ಲಿ 1200 ಕೋಟಿ ರೂಪಾಯಿಗಳ ಗಡಿಯನ್ನು ತಲುಪುತ್ತಿದೆ. 26 ದಿನಗಳಲ್ಲಿ ಚಿತ್ರ 1150 ಕೋಟಿ ರೂ.ಗೂ ಹೆಚ್ಚು ಕಲೆಕ್ಷನ್ ಮಾಡಿದ್ದು, ಹೊಸ ಮೈಲಿಗಲ್ಲು ತಲುಪಲು ದಾಪುಗಾಲಿಟ್ಟಿದೆ.

ಅಮೀರ್ ಖಾನ್ ಅವರ ‘ದಂಗಲ್’, ಎಸ್‌.ಎಸ್. ರಾಜಮೌಳಿ ಅವರ ‘ಬಾಹುಬಲಿ: ದಿ ಕನ್‌ಕ್ಲೂಷನ್’ ನಂತರ ಅತಿ ಹೆಚ್ಚು ಗಳಿಸಿದ ಮೂರನೇ ಭಾರತೀಯ ಚಲನಚಿತ್ರ ‘ಕೆಜಿಎಫ್ ಚಾಪ್ಟರ್ 2’ ಆಗಿದೆ.

‘ಕೆಜಿಎಫ್ ಚಾಪ್ಟರ್ 2’ ದಕ್ಷಿಣ ಕೊರಿಯಾದಲ್ಲಿ ಕೂಡ ಪ್ರದರ್ಶನ ಕಂಡಿದೆ. ಈ ಮೂಲಕ ದಕ್ಷಿಣ ಕೊರಿಯಾದಲ್ಲಿ ಪ್ರದರ್ಶನ ಕಂಡ ಮೊದಲ ಕನ್ನಡ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಯಶ್, ಸಂಜಯ್ ದತ್, ರವೀನಾ ಟಂಡನ್, ಶ್ರೀನಿಧಿ ಶೆಟ್ಟಿ, ಪ್ರಕಾಶ್ ರೈ, ಮಾಳವಿಕಾ ಅವಿನಾಶ್ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ.

ಕನ್ನಡ ಮಾತ್ರವಲ್ಲದೇ, ಹಿಂದಿ, ತೆಲುಗು, ತಮಿಳು, ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾದ ‘ಕೆಜಿಎಫ್ ಚಾಪ್ಟರ್ 2’ ಅಮೆರಿಕ, ಮಲೇಷಿಯಾ, ಸಿಂಗಾಪುರ, ಶ್ರೀಲಂಕಾ ಮೊದಲಾದ ದೇಶಗಳಲ್ಲಿಯೂ ಪ್ರದರ್ಶನ ಕಂಡಿದೆ. ಪ್ರಶಾಂತ್ ನೀಲ್ ನಿರ್ದೇಶನದ ಚಿತ್ರವನ್ನು ವಿಜಯ ಕಿರಂಗದೂರು ನಿರ್ಮಾಣ ಮಾಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...