ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಪ್ರಶಾಂತ್ ನೀಲ್ ನಿರ್ದೇಶನದ, ಹೊಂಬಾಳೆ ಫಿಲಂಸ್ ನಿರ್ಮಾಣದ ‘ಕೆಜಿಎಫ್ ಚಾಪ್ಟರ್ 2’ ಟ್ರೈಲರ್(KGF Chapter 2, Trailer) ಅದ್ದೂರಿಯಾಗಿ ಬಿಡುಗಡೆಯಾಗಿದೆ.
ನಟ ಶಿವರಾಜ್ ಕುಮಾರ್, ಸಂಜಯ್ ದತ್, ಕರಣ್ ಜೋಹರ್ ಸೇರಿದಂತೆ ಘಟಾನುಘಟಿ ಕಲಾವಿದರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆಜಿಎಫ್ ಚಾಪ್ಟರ್ 2’ ಟ್ರೈಲರ್ ಬಿಡುಗಡೆ ಮಾಡಲಾಗಿದೆ. ಕನ್ನಡ, ತೆಲುಗು, ತಮಿಳು, ಹಿಂದಿ ಮಲಯಾಳಂ ಭಾಷೆಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ.
ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಗೌರವ ನಮನ ಸಲ್ಲಿಸಲಾಗಿದೆ.
ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್, ತಮಿಳು ನಟ ಸೂರ್ಯ, ತೆಲುಗು ನಟ ರಾಮ್ ಚರಣ್, ಮಲಯಾಳಂ ನಟ ಪೃಥ್ವಿರಾಜ್, ಬಾಲಿವುಡ್ ನ ಫರ್ಹಾನ್ ಅಖ್ತರ್ ಅವರು ವಿವಿಧ ಭಾಷೆಗಳ ಟ್ರೈಲರ್ ಬಿಡುಗಡೆ ಮಾಡಿದ್ದಾರೆ.