‘ಕೆಜಿಎಫ್’ ಮತ್ತು ‘ಕೆಜಿಎಫ್ 2’ ಮೂಲಕ ದೇಶದ ಗಮನ ಸೆಳೆದ ನಿರ್ದೇಶಕ ಪ್ರಶಾಂತ್ ನೀಲ್ ಮತ್ತೆರಡು ಚಿತ್ರಗಳನ್ನು ಕೈಗೆತ್ತಿಕೊಂಡಿದ್ದಾರೆ.
ಒಂದು ಚಿತ್ರವನ್ನು ನಿರ್ದೇಶಿಸಲಿರುವ ಅವರು ಮತ್ತೊಂದು ಚಿತ್ರಕ್ಕೆ ಕತೆ ಬರೆದಿದ್ದಾರೆ. ಒಂದು ಚಿತ್ರದಲ್ಲಿ ಜೂ. ಎನ್.ಟಿ.ಆರ್., ಮತ್ತೊಂದು ಚಿತ್ರದಲ್ಲಿ ಶ್ರೀಮುರಳಿ ನಾಯಕರಾಗಿದ್ದಾರೆ.
ಟಾಲಿವುಡ್ ಸೂಪರ್ ಸ್ಟಾರ್ ಜೂನಿಯರ್ ಎನ್ಟಿಆರ್ ಅಭಿನಯದ ಚಿತ್ರವನ್ನು ಪ್ರಶಾಂತ್ ನೀಲ್ ನಿರ್ದೇಶನ ಮಾಡಲಿದ್ದಾರೆ. ಚಿತ್ರದ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ನೆನಪಿನಲ್ಲಿ ಉಳಿಯುವ ರಕ್ತದಲ್ಲಿ ನೆನೆದ ನೆಲ, ಅವನ ನೆಲ, ಅವನ ರಾಜ್ಯ, ಆದರೆ ಖಂಡಿತವಾಗಿಯೂ ಅವನ ರಕ್ತವಲ್ಲ’ ಎಂದು ಬರೆದು ಜೂನಿಯರ್ ಎನ್ಟಿಆರ್ ಅವರ ಫಸ್ಟ್ ಲುಕ್ ಫೋಟೋ ಪೋಸ್ಟ್ ಮಾಡಿದ್ದಾರೆ.ಎನ್ಟಿಆರ್ ಜನ್ಮದಿನದ ಹಿನ್ನೆಲೆಯಲ್ಲಿ ಅವರ 31 ನೇ ಸಿನಿಮಾ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿದ್ದು, ಸಂಚಲನ ಮೂಡಿಸಿದೆ.
ಇದರೊಂದಿಗೆ ‘ಬಘೀರ’ ಹೊಸ ಚಿತ್ರವನ್ನು ಪ್ರಶಾಂತ್ ನೀಲ್ ಕೈಗೆತ್ತಿಕೊಂಡಿದ್ದಾರೆ. ಹೊಂಬಾಳೆ ಫಿಲಂಸ್ ನಿರ್ಮಾಣದ ‘ಬಘೀರ’ ಚಿತ್ರಕ್ಕೆ ‘ಕೆಜಿಎಫ್’ ನಿರ್ದೇಶಕ ಪ್ರಶಾಂತ್ ನೀಲ್ ಕತೆ ಬರೆದು ಡಾ. ಸೂರಿ ನಿರ್ದೇಶಿಸಿರುವ ಚಿತ್ರದಲ್ಲಿ ನಾಯಕನಾಗಿ ಶ್ರೀಮುರಳಿ ನಟಿಸಲಿದ್ದಾರೆ. ಮುಂದಿನ ವರ್ಷ ಚಿತ್ರ ಬಿಡುಗಡೆಯಾಗಲಿದೆ.
https://twitter.com/prashanth_neel/status/1527539714885971969
https://twitter.com/prashanth_neel/status/1527520050533478400