alex Certify ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ‘ಕೆಜಿಎಫ್’ ಅಂಗಳದಿಂದ ಸಿಹಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ‘ಕೆಜಿಎಫ್’ ಅಂಗಳದಿಂದ ಸಿಹಿ ಸುದ್ದಿ

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷೆಯ ಚಿತ್ರ ‘ಕೆಜಿಎಫ್ ಚಾಪ್ಟರ್ 2’ ಬಿಡುಗಡೆ ದಿನಾಂಕ ಮೊದಲೇ ತೀರ್ಮಾನವಾಗಿದೆ.

ಲಾಕ್ಡೌನ್ ಜಾರಿಯಾಗಿದ್ದರಿಂದ ಒಂದಿಷ್ಟು ಚಿತ್ರೀಕರಣ ಬಾಕಿ ಉಳಿದಿದ್ದು ಇದೇ ವೇಳೆ ಹಾಡಿನ ರೆಕಾರ್ಡಿಂಗ್ ಕೆಲಸವನ್ನು ಆರಂಭಿಸಲಾಗಿದೆ. ಚಿತ್ರತಂಡ ಭಾನುವಾರದಿಂದ ಹಾಡಿನ ಕೆಲಸ ಆರಂಭಿಸಿದ್ದು, ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್, ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್ ಗೌಡ, ಸಂಗೀತ ನಿರ್ದೇಶಕ ರವಿ ಬಸ್ರೂರು, ಸಿನಿಮಾಟೋಗ್ರಾಫರ್ ಭುವನ್ ಗೌಡ ಅವರು ಹಾಡಿನ ಕೆಲಸ ಆರಂಭಿಸಿರುವ ಫೋಟೋವನ್ನು ನಿರ್ಮಾಪಕ ಕಾರ್ತಿಕ್ ಗೌಡ ಪೋಸ್ಟ್ ಮಾಡಿದ್ದಾರೆ.

‘ಕೆಜಿಎಫ್ ಚಾಪ್ಟರ್ 2’ ಹಾಡಿನ ಕೆಲಸ ಆರಂಭವಾಗಿರುವುದು ಅಭಿಮಾನಿಗಳಲ್ಲಿ ಖುಷಿ ತಂದಿದೆ. ‘ಕೆಜಿಎಫ್’ ಕನ್ನಡ ಮಾತ್ರವಲ್ಲದೇ ಹಲವು ಭಾಷೆಗಳಲ್ಲಿ ಬಿಡುಗಡೆಯಾಗಿ ಭರ್ಜರಿ ಯಶಸ್ಸು ಕಂಡಿತ್ತು. ಈಗ ‘ಕೆಜಿಎಫ್ ಚಾಪ್ಟರ್ 2’ ಆರಂಭದಿಂದಲೂ ಭಾರಿ ನಿರೀಕ್ಷೆ ಮೂಡಿಸಿದೆ. ಲಾಕ್ ಡೌನ್ ನಡುವೆ ಚಿತ್ರದ ಕೆಲಸ ಶುರುವಾಗಿರುವುದು ಅಭಿಮಾನಿಗಳಲ್ಲಿ ಸಂತಸ ತಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...