alex Certify ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಭರ್ಜರಿ ಸುದ್ದಿ: ‘ವಿಕ್ರಾಂತ್ ರೋಣ’ ಬಿಡುಗಡೆ ದಿನಾಂಕ ಏ.2 ರಂದು ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಭರ್ಜರಿ ಸುದ್ದಿ: ‘ವಿಕ್ರಾಂತ್ ರೋಣ’ ಬಿಡುಗಡೆ ದಿನಾಂಕ ಏ.2 ರಂದು ಘೋಷಣೆ

ನವದೆಹಲಿ: ಅನೂಪ್ ಭಂಡಾರಿ ನಿರ್ದೇಶನದಲ್ಲಿ ಕಿಚ್ಚ ಸುದೀಪ್ ಅಭಿನಯಿಸಿರುವ ‘ವಿಕ್ರಾಂತ್ ರೋಣ’ ಯಾವಾಗ ಬಿಡುಗಡೆಯಾಗಲಿದೆ ಎಂಬ ಕುತೂಹಲಕ್ಕೆ ಏಪ್ರಿಲ್ 2 ರಂದು ತೆರೆ ಬೀಳಲಿದೆ.

2 ಏಪ್ರಿಲ್, 2022 ರಂದು.ಚಿತ್ರದ ಬಿಡುಗಡೆ ದಿನಾಂಕದೊಂದಿಗೆ ವಿಶೇಷ ಟೀಸರ್ ಅನ್ನು ಬಿಡುಗಡೆ ಮಾಡುವುದಾಗಿ ಹೇಳಲಾಗಿದೆ.

ಕಳೆದ ವರ್ಷ ಸೆಪ್ಟೆಂಬರ್ 2 ರಂದು ಕಿಚ್ಚ ಅವರ ಜನ್ಮದಿನದಂದು ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿತ್ತು. ‘ವಿಕ್ರಾಂತ್ ರೋಣ’ ಪ್ಯಾನ್ ವರ್ಲ್ಡ್ 3D ಚಿತ್ರವಾಗಿದ್ದು, ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಸೇರಿದಂತೆ ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಅಲ್ಲದೇ, ಅರೇಬಿಕ್, ಜರ್ಮನ್, ರಷ್ಯನ್, ಮ್ಯಾಂಡರಿನ್, ಇಂಗ್ಲಿಷ್ ಭಾಷೆಗಳಲ್ಲಿಯೂ ಬಿಡುಗಡೆ ಮಾಡುವ ನಿರೀಕ್ಷೆಯಿದೆ.

ಜೀ ಸ್ಟುಡಿಯೋಸ್ ಪ್ರಸ್ತುತಪಡಿಸುವ ‘ವಿಕ್ರಾಂತ್ ರೋಣ’ ಚಿತ್ರವನ್ನು ಜಾಕ್ ಮಂಜುನಾಥ್ ನಿರ್ಮಾಣದ ಶಾಲಿನಿ ಆರ್ಟ್ಸ್ ಅಡಿಯಲ್ಲಿ ಮತ್ತು ಇನ್ವೆನಿಯೊ ಒರಿಜಿನ್ಸ್‌ನ ಅಲಂಕಾರ್ ಪಾಂಡಿಯನ್ ಸಹ-ನಿರ್ಮಾಣ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...