ಲಕ್ಷದ್ವೀಪದ ನಟಿ, ನಿರ್ಮಾಪಕಿ ಆಯೀಷಾ ಸುಲ್ತಾನಾ ಅವರಿಗೆ ಕೇರಳ ಹೈಕೋರ್ಟ್ ರಿಲೀಫ್ ನೀಡಿದೆ. ದೇಶದ್ರೋಹ ಪ್ರಕರಣದಲ್ಲಿ ಆಯಿಷಾ ಸುಲ್ತಾನಾ ಅವರಿಗೆ ಕೇರಳ ಹೈಕೋರ್ಟ್ ಒಂದು ವಾರ ಮಧ್ಯಂತರ ಜಾಮೀನು ನೀಡಿದೆ.
ವಿಚಾರಣೆಗಾಗಿ ಪೊಲೀಸರ ಮುಂದೆ ಹಾಜರಾಗುವಂತೆ ಹೈಕೋರ್ಟ್ ತಿಳಿಸಿದೆ. ಲಕ್ಷದ್ವೀಪದ ಜನರ ವಿರುದ್ಧ ಕೇಂದ್ರ ಸರ್ಕಾರ ಕೋವಿಡ್ -19 ಜೈವಿಕ ಶಸ್ತ್ರಾಸ್ತ್ರ ಬಳಸಿದೆ ಎಂದು ಮಲಯಾಳಂ ಟಿವಿ ಚಾನೆಲ್ ನಲ್ಲಿ ಚರ್ಚೆಯ ಸಂದರ್ಭದಲ್ಲಿ ಅವರು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಲಕ್ಷದ್ವೀಪ ಪೊಲೀಸರು ಸುಲ್ತಾನಾ ವಿರುದ್ಧ ದೇಶದ್ರೋಹ ಮತ್ತು ದ್ವೇಷದ ಮಾತುಗಳ ಆರೋಪದಡಿ ಪ್ರಕರಣ ದಾಖಲಿಸಿದ್ದರು.
ಆಯೀಷಾ ಸುಲ್ತಾನಾ ವಿರುದ್ಧ ಬಿಜೆಪಿಯ ಅಬ್ದುಲ್ ಖಾದರ್ ಹಾಜಿ ದೂರು ನೀಡಿದ್ದು, ಕವರತ್ತಿ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 124ಎ, 153 ಬಿ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಲಕ್ಷದ್ವೀಪ ಆಡಳಿತಾಧಿಕಾರಿ ಪ್ರಫುಲ್ ಖೋಡಾ ಪಟೇಲ್ ಅವರ ಹೊಸ ನೀತಿಗಳ ಬಗ್ಗೆ ಆಯೀಷಾ ಸುಲ್ತಾನಾ ತೀವ್ರವಾಗಿ ಟೀಕಿಸಿದ್ದರು.