
ಮುಂಬೈ: ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿರವಾಗಿದ್ದು, ಇನ್ನೂ ತೀವ್ರ ನಿಗಾ ಘಟಕದಲ್ಲಿ(ಐಸಿಯು) ಇದ್ದಾರೆ.
ನಿರಂತರವಾಗಿ ಅವರ ಆರೋಗ್ಯವನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ವೈದ್ಯರು ಮಾಹಿತಿ ಹಂಚಿಕೊಂಡಿದ್ದಾರೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಭಾರತ ರತ್ನ ಪುರಸ್ಕೃತ ಲತಾ ಮಂಗೇಶ್ಕರ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ಡಾ. ಪ್ರತೀತ್ ಸಮ್ದಾನಿ ಅವರು, ಲತಾ ಮಂಗೇಶ್ಕರ್ ಅವರಿಗೆ ವಯಸ್ಸಾದ ಕಾರಣ ಚೇತರಿಸಿಕೊಳ್ಳಲು ಸಮಯ ಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
ಕೆಲವು ದಿನಗಳ ಹಿಂದೆ COVID-19 ಮತ್ತು ನ್ಯುಮೋನಿಯಾ ಕಾರಣದ ಲತಾ ಮಂಗೇಶ್ಕರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. COVID-19 ಪಾಸಿಟಿವ್ ಆಗಿದ್ದ ತನ್ನ ಸಿಬ್ಬಂದಿಯೊಬ್ಬರೊಂದಿಗೆ ಸಂಪರ್ಕದಲ್ಲಿದ್ದ ಅವರಿಗೆ ಸೋಂಕು ತಗುಲಿತ್ತು.
ಲತಾ ಮಂಗೇಶ್ಕರ್ ಅವರ ಆರೋಗ್ಯದ ಬಗ್ಗೆ ತಿಳಿದ ನಂತರ, ಹಲವಾರು ಅಭಿಮಾನಿಗಳು ಮತ್ತು ಚಲನಚಿತ್ರೋದ್ಯಮ ಮತ್ತು ಇತರ ಕ್ಷೇತ್ರಗಳ ಸದಸ್ಯರು ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.