alex Certify BREAKING NEWS: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ವಿಧಿವಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ವಿಧಿವಶ

ಬೆಂಗಳೂರು: ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟಿ ಲೀಲಾವತಿ(85) ನಿಧನರಾಗಿದ್ದಾರೆ.

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರು ನಟ ವಿನೋದ್ ರಾಜ್ ಅವರನ್ನು ಅಗಲಿದ್ದಾರೆ. ತೀವ್ರ ಉಸಿರಾಟದ ತೊಂದರೆ ಹಿನ್ನೆಲೆಯಲ್ಲಿ ಅವರನ್ನು ನೆಲಮಂಗಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆಗೆ ಅವರು ಮೃತಪಟ್ಟಿದ್ದಾರೆ. ಅವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ವಿನೋದ್ ರಾಜ್ ಕುಸಿದು ಬಿದ್ದಿದ್ದಾರೆ.

ಲೀಲಾವತಿ(1938) ದಕ್ಷಿಣ ಭಾರತದ ನಟಿ. ಕನ್ನಡದಲ್ಲಿ ಪ್ರಧಾನವಾಗಿ ನಟಿಸುವುದರೊಂದಿಗೆ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳ ಸುಮಾರು 6೦೦ ಚಿತ್ರಗಳಲ್ಲಿ ನಟಿಸಿದ್ದಾರೆ. ಕರ್ನಾಟಕ ಸರ್ಕಾರ ಚಲನಚಿತ್ರರಂಗದ ಜೀವಮಾನ ಸಾಧನೆಗೆ ನೀಡುವ ಅತ್ತ್ಯುನ್ನತ ಪ್ರಶಸ್ತಿ ಡಾ. ರಾಜಕುಮಾರ್ ಪ್ರಶಸ್ತಿಯನ್ನು 1999 -2000 ನೇ ಸಾಲಿನಲ್ಲಿ ಪಡೆದ ಲೀಲಾವತಿ ಅವರು, ‘ತುಮಕೂರು ವಿಶ್ವವಿದ್ಯಾಲಯ’ದ ಗೌರವ ಡಾಕ್ಟರೇಟ್ ಪದವಿಯನ್ನು 2008ರಲ್ಲಿ ಪಡೆದರು.

ಲೀಲಾವತಿ ಅವರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ. ನಾಟಕ, ರಂಗಭೂಮಿ ಬಗ್ಗೆ ಚಿಕ್ಕವಯಸ್ಸಿನಲ್ಲೇ ಆಸಕ್ತಿ ಹೊಂದಿದ್ದ ಲೀಲಾ ಅವರು ವೃತ್ತಿಜೀವನ ಆರಂಭಿಸಿದ್ದು ಮೈಸೂರಿನಲ್ಲಿ. ವೃತ್ತಿರಂಗಭೂಮಿಯಲ್ಲಿ ಸಂಪೂರ್ಣ ತೊಡಗಿಸಿಕೊಳ್ಳುವ ಮುನ್ನ ಕೆಲವೆಡೆ ಮನೆ ಕೆಲಸವನ್ನೂ ಅವರು ನಿರ್ವಹಿಸಿದ್ದರು.

ಲೀಲಾವತಿ ಅವರ ಮಗ ವಿನೋದ್ ರಾಜ್ ಕನ್ನಡ ಚಿತ್ರರಂಗದ ಖ್ಯಾತ ನಟ. ತಾಯಿ-ಮಗ ಇಬ್ಬರೂ ತೋಟಗಾರಿಕೆ ಮತ್ತು ಕೃಷಿ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು.

ಲೀಲಾವತಿ ಅವರು 1949ರಲ್ಲಿ ಶಂಕರ್ ಸಿಂಗ್ ಅವರ ‘ನಾಗಕನ್ನಿಕ’ ಚಿತ್ರದಲ್ಲಿ ಸಖಿಯ ಪಾತ್ರದ ಮುಖಾಂತರ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಸುಬ್ಬಯ್ಯ ನಾಯ್ಡು ಅವರ ಸಂಸ್ಥೆಯಲ್ಲಿ ರಂಗಭೂಮಿ ಕಲಾವಿದೆಯಾಗಿದ್ದ ಲೀಲಾವತಿ ಅವರು ಕಯಾದುವಿನ ಸಖಿಯಾಗಿ ಅಭಿನಯಿಸಿದ್ದರು. ಮಹಾಲಿಂಗ ಭಾಗವತರ ನಾಟಕ ಸಂಸ್ಥೆಯನ್ನು ಸೇರಿ ಹಲವಾರು ನಾಟಕಗಳಲ್ಲಿ ಅಭಿನಯಿಸಿದರು. ಸುಬ್ಬಯ್ಯ ನಾಯ್ಡು ಅವರ ‘ಭಕ್ತ ಪ್ರಹ್ಲಾದ’ದಲ್ಲಿ ಕೂಡಾ ಅಭಿನಯಿಸಿದರು. ಹಲವಾರು ಚಿತ್ರಗಳಲ್ಲಿ ಚಿಕ್ಕ ಪಾತ್ರಗಳಲ್ಲಿ ಅಭಿನಯಿಸಿದರು.

ನಾಯಕಿಯಾಗಿ ಅವರು ಅಭಿನಯಿಸಿದ ಮೊದಲ ಚಿತ್ರ ‘ಮಾಂಗಲ್ಯ ಯೋಗ’. ಡಾ. ರಾಜ್ ಕುಮಾರ್ ಅವರೊಂದಿಗೆ ನಟಿಸಿದ ಮೊದಲ ಚಿತ್ರ ‘ರಣಧೀರ ಕಂಠೀರವ’.

‘ರಾಣಿ ಹೊನ್ನಮ್ಮ’ ಚಿತ್ರದ ಯಶಸ್ಸಿನ ನಂತರ ರಾಜ್ ಕುಮಾರ್ ಮತ್ತು ಲೀಲಾವತಿ ಅವರ ಜೋಡಿ ಜನಪ್ರಿಯವಾಯಿತು. ‘ಸಂತ ತುಕಾರಾಂ’, ‘ಕಣ್ತೆರೆದು ನೋಡು’, ‘ಕೈವಾರ ಮಹಾತ್ಮೆ’, ‘ಗಾಳಿ ಗೋಪುರ’, ‘ಕನ್ಯಾರತ್ನ’, ‘ಕುಲವಧು’, ‘ವೀರ ಕೇಸರಿ’, ‘ಮನ ಮೆಚ್ಚಿದ ಮಡದಿ’ ಹೀಗೆ ಹಲವಾರು ಚಿತ್ರಗಳ ನಾಯಕಿಯಾದರು. ಕೆಲಚಿತ್ರಗಳಲ್ಲಿ ನಾಯಕನಟರಿಗಿಂತ ಹೆಚ್ಚಿನ ಸಂಭಾವನೆ ಪಡೆಯುವ ನಾಯಕಿಯಾಗಿ ಗುರುತಿಸಿಕೊಂಡಿದ್ದರು.

70ರ ದಶಕದ ಬಳಿಕ ಪೋಷಕ ಪಾತ್ರಗಳಲ್ಲಿ ಲೀಲಾವತಿಯವರು ತಮ್ಮನ್ನು ತೊಡಗಿಸಿಕೊಂಡರು. ನಾಯಕಿಯಾಗಿ, ಅಮ್ಮನಾಗಿ, ಅಜ್ಜಿಯಾಗಿ ನಾನಾಬಗೆಯ ಪೋಷಕಪಾತ್ರಗಳಲ್ಲಿ ನಟಿಸಿದರು. ಅವುಗಳಲ್ಲಿ ‘ಗೆಜ್ಜೆ ಪೂಜೆ’, ‘ಸಿಪಾಯಿ ರಾಮು’, ‘ನಾಗರಹಾವು’, ‘ಭಕ್ತ ಕುಂಬಾರ’ ಮುಂತಾದ ಚಿತ್ರಗಳು ಪ್ರಮುಖವಾದವು.

ಪ್ರಶಸ್ತಿ-ಪುರಸ್ಕಾರಗಳು

2008 ತುಮಕೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್

2006 ಅತ್ತ್ಯುತ್ತಮ ಪೋಷಕನಟಿ ಫಿಲಂಫೇರ್ ಕನ್ನಡ – ಕನ್ನಡದ ಕಂದ

1999-2000 ಡಾ. ರಾಜಕುಮಾರ್ ಜೀವಮಾನ ಸಾಧನೆ ಪ್ರಶಸ್ತಿ

ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳು:

ಅತ್ತ್ಯುತ್ತಮ ಪೋಷಕನಟಿ ಪ್ರಶಸ್ತಿ

1960 -70 ಗೆಜ್ಜೆಪೂಜೆ

1971-72 ಸಿಪಾಯಿ ರಾಮು

1989 -90 ಡಾಕ್ಟರ್ ಕೃಷ್ಣ

ಸಮಾಜಸೇವೆ

ನೆಲಮಂಗಲದ ಸುತ್ತಮುತ್ತ ವಾಸಿಸುವ ಜನರ ಆರೋಗ್ಯ ಸೇವೆಗಾಗಿ ಸೋಲದೇವನಹಳ್ಳಿಯಲ್ಲಿ ಆಸ್ಪತ್ರೆಯೊಂದನ್ನು ಲೀಲಾವತಿ ಕಟ್ಟಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...