ಚೆನ್ನೈ: ಕೊರೊನಾ ಸೋಂಕು ತಗುಲಿ ಆಗಸ್ಟ್ 5 ರಿಂದ ಚೆನ್ನೈನ ಎಂಜಿಎಂ ಹೆಲ್ತ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡುಬಂದಿದೆ.
ತಮ್ಮನ್ನು ಕಾಳಜಿ ಮತ್ತು ಪ್ರೀತಿಯಿಂದ ನೋಡಿಕೊಳ್ಳುತ್ತಿರುವ ವೈದ್ಯರು ಹಾಗೂ ನರ್ಸ್ ಗಳಿಗೆ ಎಸ್.ಪಿ. ಬಾಲಸುಬ್ರಹ್ಮಣ್ಯಂ ‘ಲವ್ ಯು ಆಲ್’ ಎಂದು ಬರೆದು ಧನ್ಯವಾದ ಹೇಳಿದ್ದಾರೆ.
ಎಸ್ಪಿಬಿ ಅವರ ಪುತ್ರ ಚರಣ್, ತಮ್ಮ ತಂದೆಯವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ. ಆಸ್ಪತ್ರೆಯಿಂದ ಅವರ ಆರೋಗ್ಯದ ಕುರಿತಾಗಿ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ ನೀಡಲಾಗಿದೆ.
ಕೊಂಚ ಚೇತರಿಕೆ ಕಂಡುಬಂದಿದ್ದು ‘ಲವ್ ಯು ಆಲ್’ ಎಂದು ಪೇಪರ್ ನಲ್ಲಿ ಬರೆದು ತೋರಿಸಿದ್ದಾರೆ ಎನ್ನಲಾಗಿದೆ. ಜೀವರಕ್ಷಕ ಸಾಧನಗಳ ನೆರವಿನಿಂದ ಅವರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ. ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ವೈದ್ಯರ ಸಲಹೆಯೊಂದಿಗೆ ನಿರಂತರ ನಿಗಾ ವಹಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಲಾಗಿದೆ.