ಕೊಲ್ಕತ್ತಾ: ಬಂಗಾಳಿ ಖ್ಯಾತ ನಟ ಸೌಮಿತ್ರ ಚಟರ್ಜಿ ಕೊಲ್ಕತ್ತಾ ಆಸ್ಪತ್ರೆಯಲ್ಲಿ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ. ಕೊರೋನಾ ಸೇರಿವಿವಿಧ ಕಾಯಿಲೆಗಳಿಂದ ಬಳಲಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.
ಕೋವಿಡ್-19 ಪಾಸಿಟಿವ್ ಪರೀಕ್ಷೆ ವರದಿ ಬಂದ ನಂತರ ಅಕ್ಟೋಬರ್ 6 ರಂದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಒಂದು ತಿಂಗಳ ನಂತರವೂ ಚೇತರಿಸಿಕೊಳ್ಳದ ಅವರು ಭಾನುವಾರ ನಿಧನರಾಗಿದ್ದಾರೆ ಎಂದು ಆಸ್ಪತ್ರೆಯಿಂದ ಹೇಳಿಕೆ ಬಿಡುಗಡೆ ಮಾಡಲಾಗಿದೆ.
ಸೌಮಿತ್ರ ಚಟರ್ಜಿ ಪತ್ನಿ, ಮಗ, ಮಗಳನ್ನು ಅಗಲಿದ್ದಾರೆ. ನರ ಸಂಬಂಧಿ ಕಾಯಿಲೆ ಸೇರಿದಂತೆ ಅನೇಕ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ನಂತರವೂ ಚೇತರಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಅವರು ಇಂದು 12.15 ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ಭಾರವಾದ ಹೃದಯದಿಂದ ಘೋಷಿಸುತ್ತೇವೆ ಎಂದು ಆಸ್ಪತ್ರೆಯಿಂದ ಹೇಳಿಕೆ ಬಿಡುಡಗೆ ಮಾಡಲಾಗಿದೆ.