ಲಾಕ್ಡೌನ್ ಜಾರಿಯಾದ ನಂತರದಲ್ಲಿ ಚಿತ್ರರಂಗದ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ಸಿನಿಮಾ ಪ್ರದರ್ಶನ ರದ್ದಾಗಿದೆ.
ಲಾಕ್ಡೌನ್ ಮುಂದುವರೆದಿದ್ದರೂ, ಚಿತ್ರರಂಗದ ಕೆಲವು ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ. ಡಬ್ಬಿಂಗ್, ಸಾಂಗ್ ರೆಕಾರ್ಡಿಂಗ್ ಸೇರಿದಂತೆ ಹಲವು ಚಟುವಟಿಕೆಗಳನ್ನು ಕೈಗೊಳ್ಳಲು ಅವಕಾಶ ನೀಡಲಾಗಿದೆ.
ಲಾಕ್ಡೌನ್ ಸಂದರ್ಭದಲ್ಲಿ ಇಬ್ಬರು ನಟರು ನಿಧನರಾಗಿರುವುದು ಕನ್ನಡ ಚಿತ್ರರಂಗಕ್ಕೆ ಆಘಾತ ತಂದಿದೆ. ಕಳೆದ ತಿಂಗಳು ಖ್ಯಾತ ಹಾಸ್ಯ ನಟ ಬುಲೆಟ್ ಪ್ರಕಾಶ್ ಅನಾರೋಗ್ಯದಿಂದ ನಿಧನರಾಗಿದ್ದರು. ಇದರ ಬೆನ್ನಲ್ಲೇ ಖ್ಯಾತನಟ ಚಿರಂಜೀವಿ ಸರ್ಜಾ ನಿಧನರಾಗಿರುವುದು ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ.