ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಬಿರುಸುಗೊಂಡಿದೆ. ಸಿನಿ ತಾರೆಯರು, ರಾಜಕೀಯ ನಾಯಕರು ಕುಟುಂಬ ಸಮೇತರಾಗಿ ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಿದ್ದಾರೆ.
ಬೆಂಗಳೂರಿನ ಆರ್.ಆರ್.ನಗರ ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಂತು ನಟ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮೀ ಮತಚಲಾವಣೆ ಮಾಡಿದ್ದಾರೆ.
ಇದೇ ವೇಳೆ ನಟಿ ರಚಿತಾರಾಮ್ ಕೂಡ ಸಾಮಾನ್ಯ ಜನರಂತೆ ಅರ್ಧಗಂಟೆಗೂ ಹೆಚ್ಚು ಕಾಲ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದಾರೆ. ಈ ವೇಳೆ ರಚಿತಾ ರಾಮ್ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಅಭಿಮಾನಿಗಳು ಸಂಭ್ರಮಿಸಿದರು.