alex Certify ಸೂಪರ್ ಸ್ಟಾರ್ ರಜನಿಕಾಂತ್ ಜೊತೆ ರಾಕಿಂಗ್ ಸ್ಟಾರ್ ಯಶ್ ಸಿನಿಮಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೂಪರ್ ಸ್ಟಾರ್ ರಜನಿಕಾಂತ್ ಜೊತೆ ರಾಕಿಂಗ್ ಸ್ಟಾರ್ ಯಶ್ ಸಿನಿಮಾ…?

ಸೂಪರ್ ಸ್ಟಾರ್ ರಜನಿಕಾಂತ್ ಅವರ ಮುಂದಿನ ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್ ನಟಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಲೋಕೇಶ್ ಕನಗರಾಜ್ ನಿರ್ದೇಶನದಲ್ಲಿ ರಜನಿಕಾಂತ್ ಹೊಸ ಚಿತ್ರ ಮೂಡಿಬರಲಿದೆ. ಆಕ್ಷನ್ ಡ್ರಾಮಾ ಕಥೆಯಾಗಿರುವ ಈ ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಚಿತ್ರದಲ್ಲಿ ನಟಿಸುವಂತೆ ರಾಕಿಂಗ್ ಸ್ಟಾರ್ ಯಶ್ ಅವರಿಗೆ ಕೇಳಿಕೊಳ್ಳಲು ಚಿತ್ರತಂಡ ಚಿಂತನೆ ನಡೆಸಿದ್ದು, ಶೀಘ್ರವೇ ಯಶ್ ಅವರನ್ನು ಭೇಟಿಯಾಗಿ ನಟಿಸುವಂತೆ ಕೋರುವ ಸಾಧ್ಯತೆ ಇದೆ.

ರಾಕಿಂಗ್ ಸ್ಟಾರ್ 19ನೇ ಸಿನಿಮಾ ಘೋಷಣೆ ಯಾವಾಗ ಎಂದು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಇತ್ತೀಚೆಗೆ ನಿತೇಶ್ ತಿವಾರಿ ಅವರ ‘ರಾಮಾಯಣ’ದಲ್ಲಿ ಯಶ್ ನಟಿಸಲಿದ್ದಾರೆ ಎಂದು ಸುದ್ದಿಯಾಗಿತ್ತು. ಈಗ ರಜನಿಕಾಂತ್ ಸಿನಿಮಾದಲ್ಲಿ ಅಭಿನಯಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...