
ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ‘ಮದಗಜ’ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಬಿಡುಗಡೆಯಾದಲ್ಲೆಲ್ಲ ಯಶಸ್ವಿ ಪ್ರದರ್ಶನ ಕಾಣುತ್ತಿರುವ ‘ಮದಗಜ’ ಶ್ರೀಮುರುಳಿ ಚಿತ್ರಗಳ ಮೊದಲ ದಿನದ ಗಳಿಕೆಯಲ್ಲಿ ದಾಖಲೆ ಬರೆದಿದೆ. ಮೊದಲ ದಿನ ‘ಮದಗಜ’ ಸುಮಾರು 8 ಕೋಟಿ ರೂ.ನಷ್ಟು ಕಲೆಕ್ಷನ್ ಮಾಡಿದೆ ಎಂದು ಹೇಳಲಾಗಿದೆ.
ಮಹೇಶ್ ಕುಮಾರ್ ನಿರ್ದೇಶನದ ಚಿತ್ರವನ್ನು ಉಮಾಪತಿ ಶ್ರೀನಿವಾಸಗೌಡ ನಿರ್ಮಾಣ ಮಾಡಿದ್ದಾರೆ. ಶ್ರೀಮುರಳಿ ಅವರೊಂದಿಗೆ ಜಗಪತಿಬಾಬು, ಆಶಿಕಾ ರಂಗನಾಥ್, ಗರುಡ ರಾಮ್, ಚಿಕ್ಕಣ್ಣ, ಶಿವರಾಜ್ ಕೆ.ಆರ್. ಪೇಟೆ, ಮೊದಲಾದವರು ಅಭಿನಯಿಸಿದ್ದಾರೆ. ಸುಮಾರು 900 ಸ್ಕ್ರೀನ್ ಗಳಲ್ಲಿ ‘ಮದಗಜ’ ಪ್ರದರ್ಶನ ಕಾಣುತ್ತಿದೆ. ಅಭಿಮಾನಿಗಳು, ಸಿನಿ ರಸಿಕರು ಸಿನಿಮಾ ನೋಡಲು ಮುಗಿಬಿದ್ದಿದ್ದು ಶನಿವಾರ ಮತ್ತು ಭಾನುವಾರ ವೀಕೆಂಡ್ ಗಳಿಕೆಯಲ್ಲಿ ದಾಖಲೆ ಬರೆಯುವ ನಿರೀಕ್ಷೆಯಿದೆ.