alex Certify ಹಣ ಕೇಳಿದ್ದಕ್ಕೆ ಕೊಲೆ ಯತ್ನ: ನಟ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಣ ಕೇಳಿದ್ದಕ್ಕೆ ಕೊಲೆ ಯತ್ನ: ನಟ ಅರೆಸ್ಟ್

ತ್ರಿಶೂರ್: ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಆರೋಪದ ಮೇಲೆ ಮಲಯಾಳಂ ನಟ ವಿನೀತ್ ಥಟ್ಟಿಲ್ ಅವರನ್ನು ಕೇರಳದ ತ್ರಿಶೂರ್‌ನಲ್ಲಿ ಬಂಧಿಸಲಾಗಿದೆ.

ಜುಲೈ 24 ರಂದು ಅಲಪ್ಪುಳ ಮೂಲದ ಅಲೆಕ್ಸ್ ಎಂಬಾತನ ಮೇಲೆ ಹಲ್ಲೆ ನಡೆಸಿದ್ದಕ್ಕಾಗಿ ವಿನೀತ್ ತಟ್ಟಿಲ್(45) ಅವರನ್ನು ಬಂಧಿಸಲಾಗಿದ್ದು, ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಟ್ಟಿಲ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 308 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹಲ್ಲೆಗೊಳಗಾದ ಅಲೆಕ್ಸ್ ಕೂಡ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿನೀತ್ ‘ಅಯ್ಯಪ್ಪನುಂ ಕೊಶಿಯುಂ’, ‘ಅಂಗಮಲ್ಲಿ ಡೈರೀಸ್’, ‘ಆಡು 2’ ಮುಂತಾದ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...