ನವದೆಹಲಿ: ಚಿತ್ರಮಂದಿರಗಳಲ್ಲಿ ಶೇಕಡ 100 ರಷ್ಟು ಸೀಟು ಭರ್ತಿಮಾಡಲು ತಮಿಳುನಾಡಿನಲ್ಲಿ ಅವಕಾಶ ನೀಡಲಾಗಿದೆ. ಇದಾದ ನಂತರ ಅನೇಕ ರಾಜ್ಯಗಳಲ್ಲಿಯೂ ಸಿನಿಮಾ ಥಿಯೇಟರ್ ಗಳಲ್ಲಿ ಶೇಕಡ 100 ರಷ್ಟು ಆಸನ ಭರ್ತಿಗೆ ಅನುಮತಿ ನೀಡುವ ಕುರಿತು ಚರ್ಚೆ ನಡೆದಿದೆ.
ಆದರೆ, ಕೇಂದ್ರ ಸರ್ಕಾರ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ. ಸಿನಿಮಾ ಹಾಲ್ ನಲ್ಲಿ ಶೇಕಡ 100 ರಷ್ಟು ಆಸನ ಭರ್ತಿ ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರಕ್ಕೆ ಕೇಂದ್ರ ಗೃಹ ಇಲಾಖೆ ಕಾರ್ಯದರ್ಶಿ ಅಜಯ್ ಭಲ್ಲಾ ಪತ್ರ ಬರೆದಿದ್ದಾರೆ.
ಶೇಕಡ 100 ರಷ್ಟು ಆಸನ ಭರ್ತಿ ವಿಚಾರ ಕೈಬಿಡಬೇಕೆಂದು ಸೂಚನೆ ನೀಡಿದ್ದಾರೆ. ಇದು ಕೇಂದ್ರ ಸರ್ಕಾರ ನೀಡಿದ ಮಾರ್ಗಸೂಚಿಯ ಉಲ್ಲಂಘನೆಯಾಗುತ್ತದೆ. ಕೇಂದ್ರ ಸರ್ಕಾರ ಶೇಕಡ 50 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಿದೆ. ಯಾವುದೇ ಕಾರಣಕ್ಕೂ ನಿಯಮ ಮುರಿಯಬಾರದು ಎಂದು ಸೂಚನೆ ನೀಡಿ ತಮಿಳುನಾಡು ಸಿಎಸ್ ಗೆ ಕೇಂದ್ರ ಗೃಹಕಾರ್ಯದರ್ಶಿ ಪತ್ರ ಬರೆದು ಸೂಚನೆ ನೀಡಿದ್ದಾರೆ.