alex Certify ಹಾಸ್ಯ ನಟ ಮೈಕಲ್ ಮಧು ಇನ್ನಿಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಸ್ಯ ನಟ ಮೈಕಲ್ ಮಧು ಇನ್ನಿಲ್ಲ

ಬೆಂಗಳೂರು: ಹಾಸ್ಯನಟ ಮೈಕಲ್ ಮಧು(54) ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರು ‘ಸ್ನೇಹಲೋಕ’, ‘ಸೂರ್ಯವಂಶ’, ‘ಎಕೆ-47’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ಹಾಸ್ಯನಟರಾಗಿ ಅಭಿನಯಿಸಿದ್ದಾರೆ.

ಮೈಕಲ್ ಮಧು ಬುಧವಾರ ರಾತ್ರಿ ಮನೆಯಲ್ಲಿ ಊಟ ಮಾಡಿದ ನಂತರ ಕುಳಿತುಕೊಂಡಿದ್ದ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಅವರನ್ನು ಕೂಡಲೇ ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದು, ಇಂದು ಬೆಳಿಗ್ಗೆ ಕುಟುಂಬದವರಿಗೆ ಮೃತದೇಹ ಹಸ್ತಾಂತರ ಮಾಡಲಾಗುವುದು ಎಂದು ಹೇಳಲಾಗಿದೆ.

ಮೈಕಲ್ ಮಧು ಪತ್ನಿ, ಇಬ್ಬರು ಪುತ್ರಿಯರು ಮತ್ತು ಅಭಿಮಾನಿಗಳನ್ನು ಅಗಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...