ಕಾಂಟ್ರವರ್ಸಿ ಕ್ವೀನ್ ಪೂನಂ ಪಾಂಡೆ ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾಳೆ. ಲಾಕ್ ಡೌನ್ ಸಂದರ್ಭದಲ್ಲಿ ಮುಂಬೈನ ಮರೀನ್ ಡ್ರೈವ್ ನಲ್ಲಿ ಬಿಎಂಡಬ್ಲ್ಯೂ ಕಾರ್ ನಲ್ಲಿ ಸುತ್ತಾಡಿದ್ದಾಳೆ.
ಲಾಕ್ ಡೌನ್ ನಿಯಮ ಉಲ್ಲಂಘಿಸಿದ ಕಾರಣ ಪೂನಂ ಪಾಂಡೆ ಹಾಗೂ ಆಕೆ ಸ್ನೇಹಿತನನ್ನು ಬಂಧಿಸಿದ್ದಾರೆ. ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ಪೂನಂ ಪಾಂಡೆ ಅಶ್ಲೀಲ ಫೋಟೋಗಳನ್ನು ಹಾಕಿ ಸುದ್ದಿಯಲ್ಲಿರ್ತಾಳೆ. ಈಗ ನಿಯಮ ಮೀರಿ ಪೊಲೀಸ್ ಅತಿಥಿಯಾಗಿದ್ದಾಳೆ.
ದೇಶದಲ್ಲಿ ಮೇ.17ರವರೆಗೆ ಲಾಕ್ ಡೌನ್ ಜಾರಿಯಲ್ಲಿದೆ. ಮುಂಬೈನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿದೆ. ಹಾಗಾಗಿ ಮತ್ತಷ್ಟು ಎಚ್ಚರಿಕೆ ತೆಗೆದುಕೊಳ್ಳುವುದು ಮುಖ್ಯವಾಗಿದೆ.