ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಅವರ ಸಾವಿನ ಸುದ್ದಿ ಆಘಾತ ತಂದಿದೆ. ಉದಯೋನ್ಮುಖ ಯುವ ನಟ ಬೇಗನೆ ನಮ್ಮನ್ನು ಅಗಲಿದ್ದಾರೆ. ಕಿರುತೆರೆ ಮತ್ತು ಚಲನಚಿತ್ರಗಳಲ್ಲಿ ಉತ್ತಮ ಸಾಧನೆ ತೋರಿದ ಅವರು ಮನರಂಜನಾ ಕ್ಷೇತ್ರದಲ್ಲಿ ಬೆಳವಣಿಗೆ ಕಾಣುತ್ತಿದ್ದರು. ಅನೇಕರಿಗೆ ಸ್ಫೂರ್ತಿಯಾಗಿದ್ದರು. ಅವರು ಹಲವು ನೆನಪುಗಳನ್ನು ಬಿಟ್ಟು ಅಗಲಿದ್ದಾರೆ. ಅವರ ನಿಧನದಿಂದ ಆಘಾತವಾಗಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ದೊರೆಯಲಿ ಎಂದು ಹೇಳಿದ್ದಾರೆ.