ಮುಂಬೈ: ಡ್ರಗ್ಸ್ ಪ್ರಕರಣದಲ್ಲಿ ಖ್ಯಾತ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಗೆ ಜೈಲೇ ಗತಿಯಾಗಿದೆ. ಮುಂಬೈನ ಕಿಲ್ಲಾ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ವಹಿಸಿದೆ. ಆರ್ಯನ್ ಖಾನ್ ಸೇರಿದಂತೆ 7 ಜನರನ್ನು ನ್ಯಾಯಾಂಗ ಬಂಧನಕ್ಕೆ ವಹಿಸಿದೆ.
ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ NCB ಯಿಂದ ಬಂಧಿತರಾಗಿದ್ದ ಆರ್ಯನ್ ಖಾನ್ ಸೇರಿ 7 ಮಂದಿಯನ್ನು ಕಸ್ಟಡಿ ಅವಧಿ ಅಂತ್ಯಗೊಂಡಿದ್ದರಿಂದ ಇಂದು ಕಿಲ್ಲಾ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು.
ವಿಚಾರಣೆ ನಡೆಸಿದ ಕೋರ್ಟ್, ವಾದ, ಪ್ರತಿವಾದ ಆಲಿಸಿದ ನಂತರ ಜಾಮೀನು ನೀಡಲು ನಿರಾಕರಿಸಿ ಆರ್ಯನ್ ಸೇರಿ 7 ಜನರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ.