alex Certify ಮಾಡೆಲ್ ಗಳನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದ ನಟಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಡೆಲ್ ಗಳನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದ ನಟಿ ಅರೆಸ್ಟ್

ಮುಂಬೈ: ಮಾಡೆಲ್ ಗಳನ್ನು ವೇಶ್ಯಾವಾಟಿಕೆಗೆ ಬಳಸಿಕೊಳ್ಳುತ್ತಿದ್ದ ಭೋಜಪುರಿ ನಟಿ ಸುಮನ್ ಕುಮಾರಿ(24)ಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಗುರುಗ್ರಾಮದ ರಾಯಲ್ ಪಾಮ್ ಹೋಟೆಲ್ ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದ್ದು, ಮಾಡೆಲ್ ಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂಬ ಮಾಹಿತಿ ತಿಳಿದ ಪೊಲೀಸರು ಹೋಟೆಲ್ ಮೇಲೆ ಶುಕ್ರವಾರ ರಾತ್ರಿ ದಾಳಿ ನಡೆಸಿದ್ದಾರೆ. ವೇಶ್ಯಾವಾಟಿಕೆ ಜಾಲದ ನಿರ್ವಾಹಕಿ ಸುಮನ್ ಕುಮಾರಿಯನ್ನು ಬಂಧಿಸಲಾಗಿದೆ. ಮೂವರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ.

ಸಿನಿಮಾದಲ್ಲಿ ಅವಕಾಶ ಪಡೆಯುವ ಆಸೆಯಿಂದ ಬರುವ ಮಾಡೆಲ್ ಗಳು, ಯುವತಿಯರನ್ನು ಸುಮನ್ ಕುಮಾರಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಳು. ಆರ್ಥಿಕವಾಗಿ ಕಷ್ಟದಲ್ಲಿರುವವರಿಗೆ ಹಣದ ಆಮಿಷವೊಡ್ಡಿ ವೇಶ್ಯಾವಾಟಿಕೆಗೆ ಬಳಸಿಕೊಳ್ಳುತ್ತಿದ್ದಳು. ಒಬ್ಬರಿಗೆ 50 ರಿಂದ 80 ಸಾವಿರ ರೂ. ವರೆಗೆ ಚಾರ್ಜ್ ಮಾಡುತ್ತಿದ್ದಳು ಎನ್ನುವುದು ತನಿಖೆಯಲ್ಲಿ ಗೊತ್ತಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...