ನಿರ್ಮಾಪಕ ಮುನಿರತ್ನ ಅವರ ಹುಟ್ಟುಹಬ್ಬಕ್ಕೆ ನಟ ನಿಖಿಲ್ ಕುಮಾರಸ್ವಾಮಿ ಶುಭಕೋರಿದ್ದಾರೆ. ಇದಕ್ಕೆ ಅನೇಕರು ಆಕ್ಷೇಪ ಎತ್ತಿದ್ದಾರೆ. ಕುಮಾರಸ್ವಾಮಿಯವರಿಗೆ ದ್ರೋಹ ಬಗೆದವರಿಗೆ ಶುಭಕೋರಬಾರದಿತ್ತು ಎಂದು ಹೇಳಿದ್ದಾರೆ.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ನಿಖಿಲ್ ಕುಮಾರಸ್ವಾಮಿ, ಎಲ್ಲರ ಅಭಿಪ್ರಾಯಗಳನ್ನು ಗೌರವಿಸುತ್ತೇನೆ. ನಾನು ನಟನಾಗಿ ನಿರ್ಮಾಪಕನಿಗೆ ಶುಭ ಕೋರುತ್ತೇನೆ ಹೊರತು ಯುವ ಜನತಾದಳ ನಾಯಕನಾಗಿ ಅಲ್ಲವೆಂದು ತಿಳಿಸಿದ್ದಾರೆ.
ರಾಜಕೀಯ ಸಂಘರ್ಷಗಳನ್ನು ಮೀರಿ ದೇವೇಗೌಡರು ಮೋದಿ ಅವರಿಗೆ ಶುಭ ಕೋರುತ್ತಾರೆ. ಮೋದಿ ಅವರು ದೇವೇಗೌಡರಿಗೆ ಶುಭ ಕೋರುತ್ತಾರೆ. ಅದೇ ರೀತಿ ಯಡಿಯೂರಪ್ಪನವರು ಕುಮಾರಸ್ವಾಮಿ ಅವರಿಗೆ ಶುಭ ಹಾರೈಸುತ್ತಾರೆ. ಕುಮಾರಸ್ವಾಮಿಯವರು ಶುಭಹಾರೈಕೆ ತಿಳಿಸುತ್ತಾರೆ. ಇದು ಕರ್ನಾಟಕ ರಾಜಕೀಯದ ಸಂಪ್ರದಾಯವಾಗಿದೆ. ಹೀಗಾಗಿ ನನ್ನ ಶುಭ ಕೋರಿಕೆಯಲ್ಲಿ ತಪ್ಪು ಇರದು ಎಂದು ಭಾವಿಸುತ್ತೇನೆ ಎಂದು ನಿಖಿಲ್ ತಿಳಿಸಿದ್ದಾರೆ.
ರಾಜಕೀಯವಾಗಿ ಮುನಿರತ್ನ ಅವರು ಕುಮಾರಸ್ವಾಮಿಯವರಿಗೆ ಏನೇ ಮಾಡಿರಬಹುದು. ಅವುಗಳಿಗೆ ಕಣದಲ್ಲಿ ಉತ್ತರಿಸುವ ಪ್ರಯತ್ನ ಮಾಡೋಣ. ಅದರಲ್ಲಿ ಎರಡು ಮಾತಿಲ್ಲ, ಜೆಡಿಎಸ್ ಪಕ್ಷದ ಕಾರ್ಯಕರ್ತನಾಗಿ ಯುವ ಜನತಾದಳದ ಮುಂದಾಳುವಾಗಿ ನನ್ನ ದುಡಿಮೆ ಪಕ್ಷಕ್ಕೆ ಮಾತ್ರ ಎಂದು ನಿಖಿಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
https://www.facebook.com/iamNikhilGowda/posts/2869099629862879