
ಮೈಸೂರು: ಮೈಸೂರಿನ ಚಾಮುಂಡಿಬೆಟ್ಟಕ್ಕೆ ನಟ ದರ್ಶನ್ ಭೇಟಿ ನೀಡಿದ್ದು, ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದುಕೊಂಡಿದ್ದಾರೆ.
ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಭೇಟಿ ನೀಡಿದ ಅವರು ಚಾಮುಂಡೇಶ್ವರಿ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆನ್ನಲಾಗಿದೆ.
ಆಷಾಢ ಶುಕ್ರವಾರಗಳಂದು ಚಾಮುಂಡೇಶ್ವರಿ ದರ್ಶನಕ್ಕೆ ಹೆಚ್ಚಿನ ಸಂಖ್ಯೆಯ ಭಕ್ತರು ಬರುತ್ತಾರೆ. ಆದರೆ, ಈ ಬಾರಿ ಕೊರೊನಾ ಕಾರಣದಿಂದ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.