ಮೈಸೂರು: ಮೈಸೂರು ವಿಶ್ವವಿದ್ಯಾನಿಲಯ ಇಂದು ಪವರ್ ಸ್ಟಾರ್, ದಿ.ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ ಮಾಡಿದೆ.
ಇಂದು ಮೈಸೂರು ವಿಶ್ವವಿದ್ಯಾನಿಲಯದ 102ನೇ ಘಟಿಕೋತ್ಸವ ಹಿನ್ನೆಲೆಯಲ್ಲಿ ಪುನೀತ್ ರಾಜ್ ಕುಮಾರ್ ಚಿತ್ರರಂಗ ಹಾಗೂ ಸಾಮಾಜಿಕ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಪರಿಗಣಿಸಿ, ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಪುನೀತ್ ಪತ್ನಿ ಅಶ್ವಿನಿ ಈ ಗೌರವವನ್ನು ಸ್ವೀಕರಿಸಿದರು.
ಮೇಕೆದಾಟು ವಿಚಾರವಾಗಿ ತಮಿಳುನಾಡು ನಿರ್ಣಯಕ್ಕೆ ಯಾವುದೇ ಬೆಲೆಯಿಲ್ಲ; ಅವರಿಗೆ ಕಾವೇರಿ ಒಂದು ರಾಜಕೀಯ ದಾಳ; ಸಿಎಂ ಬೊಮ್ಮಾಯಿ ಕಿಡಿ
ವಿಶೇಷವೆಂದರೆ 46 ವರ್ಷಗಳ ಹಿಂದೆ ಡಾ.ರಾಜ್ ಕುಮಾರ್ ಅವರಿಗೂ ಮೈಸೂರು ವಿವಿ ಗೌರವ ಡಾಕ್ಟರೇಟ್ ನೀಡಿತ್ತು. ಇನ್ನು ಕಾರ್ಯಕ್ರಮದಲ್ಲಿ ಡಾ.ರಾಜ್ ಕುಮಾರ್ ಕುಟುಂಬ ಸದಸ್ಯರು ಭಾಗಿಯಾಗಿದ್ದರು.