
ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಂತಿಮ ದರ್ಶನಕ್ಕೆ ಬೆಂಗಳೂರಿಗೆ ಆಗಮಿಸಿ ರಾಜ್ ಕುಟುಂಬದವರಿಗೆ ಸಾಂತ್ವನ ಹೇಳಿ ತೆರಳಿದ್ದ ತೆಲುಗು ನಟ ನಂದಮೂರಿ ಬಾಲಕೃಷ್ಣ ಹೈದರಾಬಾದ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬಲಭುಜದ ನೋವಿನಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಅವರನ್ನು ಹೈದರಾಬಾದ್ ಬಂಜಾರ ಹಿಲ್ಸ್ ಕೇರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಾ. ರಘುವೀರ ರೆಡ್ಡಿ ನೇತೃತ್ವದ ವೈದ್ಯರ ತಂಡ ಬಾಲಯ್ಯ ಅವರಿಗೆ ನಾಲ್ಕು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿದೆ. ಭುಜದ ಸ್ನಾಯುಗಳಿಗೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆಸಲಾಗಿದೆ.
ಕಳೆದ ಆರು ತಿಂಗಳಿನಿಂದ ಬಲಭುಜದ ನೋವಿನಿಂದ ಅವರು ಬಳಲುತ್ತಿದ್ದರು. ಬಾಲಕೃಷ್ಣ ಅವರ ‘ಅಖಂಡ’ ಸಿನಿಮಾ ಬಿಡುಗಡೆಗೆ ರೆಡಿಯಾಗಿದ್ದು, ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ.